'ವಿದ್ಯಾಸಿರಿ ಯೋಜನೆಗೆ ಬಿಜೆಪಿ ಸರ್ಕಾರ ಕಲ್ಲು ಹಾಕುತ್ತಿದೆ'

ನನ್ನ ಸ್ವಂತ ಅನುಭವದ ಆಧಾರದ ಮೇಲೆ ರೂಪಿಸಿದ್ದ ವಿದ್ಯಾಸಿರಿ ಯೋಜನೆಗೆ ಬಿಜೆಪಿ ಸರ್ಕಾರ ಕಲ್ಲು ಹಾಕುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಆರೋಪಿಸಿದ್ದಾರೆ.

Written by - Zee Kannada News Desk | Last Updated : Jun 18, 2022, 03:33 PM IST
  • ಹಾಸ್ಟೆಲ್ ಸಿಬ್ಬಂದಿಗೆ ಕೂಡಾ ವೇತನ ಬಿಡುಗಡೆ ಮಾಡಿಲ್ಲ.ಇವೆಲ್ಲವೂ ವಿದ್ಯಾರ್ಥಿಗಳ ವ್ಯಾಸಂಗದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಅವರು ಹೇಳಿದರು.
'ವಿದ್ಯಾಸಿರಿ ಯೋಜನೆಗೆ ಬಿಜೆಪಿ ಸರ್ಕಾರ ಕಲ್ಲು ಹಾಕುತ್ತಿದೆ'  title=
Photo Courtsey: Twitter

ಬೆಂಗಳೂರು: ನನ್ನ ಸ್ವಂತ ಅನುಭವದ ಆಧಾರದ ಮೇಲೆ ರೂಪಿಸಿದ್ದ ವಿದ್ಯಾಸಿರಿ ಯೋಜನೆಗೆ ಬಿಜೆಪಿ ಸರ್ಕಾರ ಕಲ್ಲು ಹಾಕುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಆರೋಪಿಸಿದ್ದಾರೆ.

ಹಾವೇರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಸಿರಿ ಸ್ಕಾಲರ್ ಷಿಪ್ ಗೆ ಕನ್ನ ಹಾಕಿದ ಪ್ರಕರಣದಲ್ಲಿ ಅಚ್ಚರಿ ಪಡುವಂತಹದೇನಿಲ್ಲ. ಬಿಜೆಪಿಯವರ 40% ಕಮಿಷನ್ ಸರ್ಕಾರದಿಂದ ಸ್ಪೂರ್ತಿ ಪಡೆದಿರುವ ಸರ್ಕಾರಿ ನೌಕರರು ನೇರವಾಗಿ ವಿದ್ಯಾರ್ಥಿಗಳು, ಮಹಿಳೆಯರು, ರೈತರು ಹೀಗೆ ಎಲ್ಲರ ಸುಲಿಗೆಗೆ ಇಳಿದಿದ್ದಾರೆ ಎಂದು ಅವರು ಕಿಡಿ ಕಾರಿದರು.

ಒಂದೆಡೆ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಸೇರಿದಂತೆ ನಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳಿಗೆ ಹಣ ನೀಡದೆ ನಿರ್ಲಕ್ಷಿಸುತ್ತಿರುವ ಸರ್ಕಾರ, ಇನ್ನೊಂದೆಡೆ ಒಂದಿಷ್ಟು ಮಂಜೂರಾಗಿರುವ ಹಣವನ್ನು ಕೂಡಾ ಬಿಡದೆ ಸರ್ಕಾರವೇ ಲೂಟಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಧಾರ್ಮಿಕ ಸ್ಥಳ, ಪಬ್ & ರೆಸ್ಟೋರೆಂಟ್‌ಗಳಲ್ಲಿ ಧ್ವನಿವರ್ಧಕ ಬ್ಯಾನ್: ಹೈಕೋರ್ಟ್

ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದೆ ಇದ್ದ ವಿದ್ಯಾರ್ಥಿಗಳು ಕೊಠಡಿ ಬಾಡಿಗೆಗೆ ಪಡೆದು ಅಡುಗೆ ಮಾಡಿಕೊಂಡು ವ್ಯಾಸಂಗ ಮಾಡಲು ನೆರವಾಗುವಂತೆ ತಿಂಗಳಿಗೆ ರೂ. 1500 ನೀಡುವ ಯೋಜನೆ ವಿದ್ಯಾಸಿರಿ. ನನ್ನ ಸ್ವಂತ ಅನುಭವದ ಆಧಾರದಲ್ಲಿ ರೂಪಿಸಿದ್ದ ಈ ಯೋಜನೆಗೆ ರಾಜ್ಯ ಸರ್ಕಾರ ಕಲ್ಲು ಹಾಕುತ್ತಿದೆ ಎಂದು ದೂರಿದರು. 

2017-18ರ ಸಾಲಿನಲ್ಲಿ ವಿದ್ಯಾಸಿರಿ ಯೋಜನೆಗೆ 88,549 ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು.ಬಿಜೆಪಿ ಅಧಿಕಾರಕ್ಕೆ ಬಂದ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಈ ಯೋಜನೆಗೆ ಹಣ ನೀಡದೆ ಹಾಸ್ಟೆಲ್ ಸೌಲಭ್ಯ ಇಲ್ಲದ ಹಿಂದುಳಿದ ಜಾತಿಯ ವಿದ್ಯಾರ್ಥಿಗಳನ್ನು ಬೀದಿಗೆ ತಳ್ಳುತ್ತಿದೆ ಎಂದು ಅವರು ಕಿಡಿ ಕಾರಿದರು.

ವಿದ್ಯಾಸಿರಿ ಯೋಜನೆಯೊಂದೇ ಅಲ್ಲ, ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಹಾಸಿಗೆ-ಹೊದಿಕೆ-ಸೋಪ್ ಗಳನ್ನೂ ಕೊಟ್ಟಿಲ್ಲ. ವಿದ್ಯಾರ್ಥಿ ವೇತನವನ್ನೂ ಬಾಕಿ ಇಟ್ಟುಕೊಳ್ಳಲಾಗಿದೆ. ಹಾಸ್ಟೆಲ್  ಸಿಬ್ಬಂದಿಗೆ ಕೂಡಾ ವೇತನ ಬಿಡುಗಡೆ ಮಾಡಿಲ್ಲ. ಇವೆಲ್ಲವೂ ವಿದ್ಯಾರ್ಥಿಗಳ ವ್ಯಾಸಂಗದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 35 ದಿನದಲ್ಲಿ 2 ಕೋಟಿ ರೂ. ಸಂಗ್ರಹ

ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಲ್ಲಿ ಶಿಕ್ಷಣವನ್ನು ಪ್ರೊತ್ಸಾಹಿಸಲು ಜಾರಿಗೆ ತಂದಿರುವ ವಿದ್ಯಾಸಿರಿ ಯೋಜನೆಗೆ ಅವಶ್ಯಕ ಹಣವನ್ನು ರಾಜ್ಯ ಸರ್ಕಾರ ತಕ್ಷಣ ಮಂಜೂರು ಮಾಡಬೇಕು. ಈಗಾಗಲೇ ಮಂಜೂರಾಗಿರುವ ಹಣವನ್ನು ಸುಲಿಗೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News