ಬಳ್ಳಾರಿ : ನಾನು ಮನಸ್ಸು ಮಾಡಿದ್ರೆ ಯಾವತ್ತಾದ್ರೂ ಒಂದು ದಿನ ಮುಖ್ಯಮಂತ್ರಿ ಆಗುವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಕಳೆದ ರಾತ್ರಿ ಜರುಗಿದ ಶಾಸಕ ಸೋಮಶೇಖರರೆಡ್ಡಿ ಹುಟ್ಡುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಜರ್ನಾದನ ರೆಡ್ಡಿ, ರೆಡ್ಡಿ, ರಾಮುಲು ಸಹೋದರರಗೆ ಇಂದು ದುಡ್ಡಿನ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು. ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ. ಸಾಮಾನ್ಯ ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದರು . ಸೋಮಶೇಖರರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷ ಆಗಿ ಕೆಲಸ ಮಾಡಿದರು, ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರು. ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಅಂತಹ ವಿಶೇಷ ಆಶೀರ್ವಾದ ಶ್ರೀ ಕನಕದುರ್ಗಮ್ಮ ದೇವಿ ನನಗೆ ನೀಡಿದ್ದಾಳೆ ಎಂದರು.
ಇದನ್ನೂ ಓದಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸಂಧಾನ ಯಶಸ್ವಿ, ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ
ಇನ್ನೂ ಮುಂದುವರೆದು ಮಾತನಾಡಿದ ಅವರು, ನನ್ನ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಇಷ್ಟೊಂದು ಸಮಸ್ಯೆ ಎದುರಿಸಲಾಗುತ್ತಿರಲಿಲ್ಲ. ಅಷ್ಟು ತೊಂದರೆ ನನಗೆ ನೀಡಿದರು. ನನ್ನ ಬಂಧನ ಮಾಡಲು ಬಂದಿದ್ದ ಸಿಬಿಐ ಅಧಿಕಾರಿಗಳೇ ಖುದ್ದು ಹೇಳಿದ್ರು. ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ, ಆದರೆ ಬಳ್ಳಾರಿಯ ಪ್ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಸಿಬಿಐನವರು ಹೇಳಿದ್ದರು ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.