ನವದೆಹಲಿ: ಯುಪಿಎಸ್ಸಿ ಪೂರ್ವಭಾವಿ ಪರೀಕ್ಷಾ ಫಲಿತಾಂಶ ಬುಧವಾರದಂದು ಪ್ರಕಟವಾಗಿದೆ.ಈಗ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಯುಪಿಎಸ್ಸಿ ಪೂರ್ವಭಾವಿ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು.
ಇದನ್ನೂ ಓದಿ: Maharashtra Political Crisis: ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆಯ ಹಿಂಟ್ ಕೊಟ್ಟ ರಾವತ್
ಶಾರ್ಟ್‌ಲಿಸ್ಟ್ ಆಗಿರುವ ಅಭ್ಯರ್ಥಿಗಳು ಐಎಫ್‌ಎಸ್ ಮುಖ್ಯ ಪರೀಕ್ಷೆಗಳು ಅಥವಾ ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆಗಾಗಿ ವಿವರವಾದ ಅರ್ಜಿ ನಮೂನೆ-I (ಡಿಎಎಫ್-ಐ) ನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ.ಯುಪಿಎಸ್ಸಿ ಮುಖ್ಯ ಪರೀಕ್ಷೆಯ ವಿವರಗಳನ್ನು ಶೀಘ್ರದಲ್ಲೇ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸುತ್ತದೆ ಎನ್ನಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ತಲೆನೋವಾದ ಏಕನಾಥ್ ಶಿಂಧೆ ; ಇಂದು ಮಹತ್ವದ ನಡೆ ಸಾಧ್ಯತೆ
ಇದಕ್ಕೂ ಮೊದಲು ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯನ್ನು ಇದೇ ಜೂನ್ 5 ರಂದು ಎರಡು ಪಾಳಿಯಲ್ಲಿ ನಡೆಸಲಾಯಿತು.ಬೆಳಗಿನ ಪಾಳಿಯು 9:30 ರಿಂದ 11:30 ವರೆಗೆ ನಡೆದರೆ,ಮಧ್ಯಾಹ್ನದ ಪಾಳಿಯು ಮಧ್ಯಾಹ್ನ 2:30 ರಿಂದ 4:30 ರವರೆಗೆ ನಡೆಯಿತು.ಈ ಹಂತದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಮುಖ್ಯಪರೀಕ್ಷೆಯ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ದೇಶಾದ್ಯಂತ ಪ್ರತಿವರ್ಷ ಸುಮಾರು 10 ಲಕ್ಷ ಅಭ್ಯರ್ಥಿಗಳು ಈ ಪ್ರತಿಷ್ಠಿತ ಪರೀಕ್ಷೆಯನ್ನು ಬರೆಯುತ್ತಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.