ನವದೆಹಲಿ: ಇಂಟೆಲಿಜೆನ್ಸ್ ಬ್ಯೂರೋದ ವಿಶೇಷ ನಿರ್ದೇಶಕ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕಾ ಅವರನ್ನು ಎರಡು ವರ್ಷಗಳ ಅವಧಿಗೆ ಇಂಟೆಲಿಜೆನ್ಸ್ ಬ್ಯೂರೋದ ನಿರ್ದೇಶಕರಾಗಿ ನೇಮಿಸಲಾಗಿದೆ.
ಇದನ್ನೂ ಓದಿ: ಕೆನಡಾದಲ್ಲಿ ಸೋಶಿಯಲ್ ಮೀಡಿಯಾ ಗ್ರೂಪ್ ರಚಿಸಿದ NRI: ಉದ್ದೇಶ ಕೇಳಿದ್ರೆ ಶಾಕ್ ಆಗ್ತೀರಾ!
ಜೂನ್ 30, 2022 ರಂದು ಅರವಿಂದ್ ಕುಮಾರ್ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ದೇಕಾ ಅವರ ಉತ್ತರಾಧಿಕಾರಿಯಾಗಲಿದ್ದಾರೆ.1988 ರ ಬ್ಯಾಚ್ನ ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ ದೇಕಾ ಅವರು ಈಶಾನ್ಯ ವ್ಯವಹಾರಗಳ ತಜ್ಞರಾಗಿದ್ದು, 2019 ರಲ್ಲಿ ಸಿಎಎ ವಿರೋಧಿ ಹಿಂಸಾಚಾರ ಭುಗಿಲೆದ್ದ ನಂತರ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂಗೆ ಕಳುಹಿಸಿದ್ದಾರೆ.
Special Director Intelligence Bureau IPS officer Tapan Kumar Deka, appointed as Director Intelligence Bureau for a tenure of two years from the date of assumption of the charge of the post or until further orders, whichever is earlier: Govt of India pic.twitter.com/Vs1hxlqNQ2
— ANI (@ANI) June 24, 2022
ಇದನ್ನೂ ಓದಿ : Maharashtra Political Crisis: ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸಿಎಂ ಉದ್ಧವ್ ಠಾಕ್ರೆಗೆ ಕೋವಿಡ್ ದೃಢ
ಪ್ರಸ್ತುತ, ತಪನ್ ಕುಮಾರ್ ಗುಪ್ತಚರ ಬ್ಯೂರೋದ ಕಾರ್ಯಾಚರಣೆ ವಿಭಾಗದ ಮುಖ್ಯಸ್ಥರಾಗಿದ್ದಾರೆ ಮತ್ತು ಕಳೆದ ಎರಡು ದಶಕಗಳಿಂದ ಭಯೋತ್ಪಾದನೆ ಮತ್ತು ಧಾರ್ಮಿಕ ಉಗ್ರವಾದ ವಿಷಯದಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಏತನ್ಮಧ್ಯೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ಆರ್&ಎಡಬ್ಲ್ಯು) ಮುಖ್ಯಸ್ಥರಾಗಿರುವ ಸಮಂತ್ ಗೋಯೆಲ್ ಅವರ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂದು ಸಚಿವಾಲಯ ಮತ್ತೊಂದು ಆದೇಶದಲ್ಲಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.