Reliance Jio Latest News - ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಹಾಗೂ ಪ್ರಧಾನ ನಿರ್ದೇಶಕರಾಗಿರುವ ಮುಖೇಶ್ ಅಂಬಾನಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಕೇಶ್ ಅಂಬಾನಿ ಅವರ ಹಿರಿಯ ಪುತ್ರ ಆಕಾಶ್ ಅಂಬಾನಿ ಇನ್ಮುಂದೆ ರಿಲಯನ್ಸ್ ಜಿಯೋ ಕಂಪನಿಯ ನೂತನ ಚೇರ್ಮನ್ ಆಗಲಿದ್ದಾರೆ. ಈ ಕುರಿತು ಭಾರತೀಯ ಷೇರು ಮಾರುಕಟ್ಟೆಗಳಿಗೆ ರಿಲಯನ್ಸ್ ಇನ್ಫೋಕಾಮ್ ಮಾಹಿತಿಯನ್ನು ನೀಡಿದೆ.
ಇದನ್ನೂ ಓದಿ -PM Kisan: ಪಿಎಂ ಕಿಸಾನ್ ಫಲಾನುಭಾವಿಗಳಿಗೆ ಬಿಗ್ ಶಾಕ್, ಇನ್ಮುಂದೆ ಈ ಮಹತ್ವದ ಸೌಕರ್ಯ ರೈತರಿಗೆ ಸಿಗಲ್ಲ
ಬಾಂಬೆ ಸ್ಟಾಕ್ ಎಕ್ಸ್ಚೇಂಜ್ಗೆ ನೀಡಲಾಗಿರುವ ಮಾಹಿತಿಯ ಪ್ರಕಾರ, ಕಂಪನಿಯ ನಿರ್ದೇಶಕರ ಮಂಡಳಿಯು ಸೋಮವಾರ ನಡೆದ ಸಭೆಯಲ್ಲಿ ಕಾರ್ಯನಿರ್ವಾಹಕೇತರ ನಿರ್ದೇಶಕ ಆಕಾಶ್ ಅಂಬಾನಿ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ನೇಮಿಸಲು ಅನುಮೋದನೆ ನೀಡಿದೆ. ಇದಕ್ಕೂ ಮೊದಲು ರಿಲಯನ್ಸ್ ಜಿಯೋ ಅಧ್ಯಕ್ಷ ಸ್ಥಾನಕ್ಕೆ ಮುಖೇಶ್ ಅಂಬಾನಿ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ-ಖ್ಯಾತ ಉದ್ಯಮಿ, ಪದ್ಮಭೂಷಣ ಪುರಸ್ಕೃತ ಪಲ್ಲೊಂಜಿ ಮಿಸ್ತ್ರಿ ನಿಧನ
ಇದರ ಜೊತೆಗೆ ಪಂಕಜ್ ಮೋಹನ್ ಪವಾರ್ ಅವರನ್ನು ಮುಂದಿನ ಐದು ವರ್ಷಗಳಿಗಾಗಿ ಕಂಪನಿಯ ಪ್ರಧಾನ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ರವಿಂದರ್ ಸಿಂಗ್ ಗುಜರಾಲ್ ಹಾಗೂ ಕೆ. ವಿ. ಚೌಧರಿ ಅವರನ್ನು ಸವತಂತ್ರ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.