India vs England : ಟೀಂ ಇಂಡಿಯಾ ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಮ್ಯಾಚ್ ಆಡಬೇಕಾಗಿದೆ. ಈಗ ಟೀಂ ಇಂಡಿಯಾ ನಾಯಕತ್ವ ಸ್ಪೋಟಕ ಬೌಲರ್ ಜಸ್ಪ್ರೀತ್ ಬುಮ್ರಾ ಕೈಯಲ್ಲಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಭಾರತ ತಂಡಕ್ಕೆ ತುಂಬಾ ಅನಿವಾರ್ಯ ಮತ್ತು ಮುಖ್ಯವಾಗಿದೆ. ಇದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮೇಲೆ ನೇರ ಪರಿಣಾಮ ಬೀರಲಿದೆ. ಹೇಗೆ? ಇಲ್ಲಿದೆ ನೋಡಿ.
ಟೀಂ ಇಂಡಿಯಾಗೆ ಇದಕ್ಕೆ ಗೆಲ್ಲುವು ಅನಿವಾರ್ಯ
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಕಳೆದ ವರ್ಷ ಕೊರೊನಾ ಹಾವಳಿಯಿಂದಾಗಿ ಆಡಿರಲಿಲ್ಲ, ಅದಕ್ಕಾಗಿ ಇದೀಗ ಟೆಸ್ಟ್ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಕೊನೆಯ ಋತುವಿನಲ್ಲಿ, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಫೈನಲ್ಗೆ ಲಗ್ಗೆ ಇಟ್ಟಿತ್ತು, ಆದ್ರೆ, ನ್ಯೂಜಿಲೆಂಡ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಟೀಂ ಇಂಡಿಯಾ ಈ ಬಾರಿ ಮೂರನೇ ಸ್ಥಾನದಲ್ಲಿದೆ. ಫೈನಲ್ಗೆ ತಲುಪಲು ಭಾರತಕ್ಕೆ ತಮ್ಮ ಕೊನೆಯ 7 ಪಂದ್ಯಗಳಲ್ಲಿ 6 ಗೆಲ್ಲಲೇ ಬೇಕಾಗಿದೆ.
ಇದನ್ನೂ ಓದಿ : Rohit Sharma out of 5th test : ಕೊನೆಯ ಟೆಸ್ಟ್ನಿಂದ ರೋಹಿತ್ ಔಟ್, ಈ ಆಟಗಾರನಿಗೆ ಹೊಸ ಕ್ಯಾಪ್ಟನ್ ಪಟ್ಟ!
ಟೀಂ ಇಂಡಿಯಾಗೆ ಬಾಕಿ ಇವೆ 7 ಟೆಸ್ಟ್ ಪಂದ್ಯಗಳು!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಹೊರತಾಗಿ, ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಾಲ್ಕು ಟೆಸ್ಟ್ ಪಂದ್ಯಗಳನ್ನು ಮತ್ತು ಬಾಂಗ್ಲಾದೇಶ ನೆಲದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಬೇಕಾಗಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತರೆ ಇನ್ನುಳಿದ 6 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದ್ದು, ಇನ್ನುಳಿದ ಪಂದ್ಯಗಳು ನಾಕೌಟ್ ಪಂದ್ಯದಂತಾಗಲಿದೆ. ಭಾರತ ತಂಡವು ಅನೇಕ ಮ್ಯಾಚ್ ವಿನ್ನರ್ ಆಟಗಾರರನ್ನು ಹೊಂದಿದೆ, ಅವರು ಪಂದ್ಯಗಳನ್ನು ಗೆಲ್ಲಬಹುದು.
15 ವರ್ಷಗಳ ಹಿಂದೆ ಭಾರತ ಸರಣಿ ಗೆದ್ದಿತ್ತು
2007ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತ ತಂಡ ಇಂಗ್ಲೆಂಡ್ ನೆಲದಲ್ಲಿ ಕೊನೆಯ ಬಾರಿ ಸರಣಿ ಗೆದ್ದಿತ್ತು. ಇದಾದ ಬಳಿಕ 2011, 2014 ಮತ್ತು 2018ರಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲನ್ನು ಎದುರಿಸಬೇಕಾಯಿತು. ಭಾರತ ತಂಡಕ್ಕೆ ಇತಿಹಾಸ ಸೃಷ್ಟಿಸುವ ಅವಕಾಶವಿದೆ. ಇದೀಗ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿದ್ದಾರೆ. ಇಂಗ್ಲೆಂಡ್ನಲ್ಲಿ ಆಡಿದ 18 ಟೆಸ್ಟ್ ಸರಣಿಗಳಲ್ಲಿ ಭಾರತ ಕೇವಲ ಮೂರರಲ್ಲಿ ಮಾತ್ರ ಗೆದ್ದಿದೆ. ಅಜಿತ್ ವಾಡೇಕರ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೊದಲ ಬಾರಿಗೆ ಇಂಗ್ಲೆಂಡ್ನಲ್ಲಿ ಸರಣಿಯನ್ನು ಗೆದ್ದುಕೊಂಡಿತು, ನಂತರ ಕಪಿಲ್ ದೇವ್ ನಾಯಕತ್ವದಲ್ಲಿ ಇಂಗ್ಲೆಂಡ್ ಅನ್ನು 2-0 ಅಂತರದಿಂದ ಸೋಲಿಸಿತು.
ಇದನ್ನೂ ಓದಿ : IND vs IRE : ರೋಹಿತ್-ರಾಹುಲ್ ಹಿಂದಿಕ್ಕಿ ವಿಶ್ವ ದಾಖಲೆ ಬರೆದ ಟೀಂ ಇಂಡಿಯಾ ಈ ಜೋಡಿ!
ಬಲಿಷ್ಠವಾಗಿದೆ ಬೌಲಿಂಗ್
ಕಳೆದ ಕೆಲವು ವರ್ಷಗಳಲ್ಲಿ ಭಾರತದ ಬೌಲಿಂಗ್ ತುಂಬಾ ಬಲಿಷ್ಠವಾಗಿದೆ. ಈ ಬೌಲರ್ ಗಳ ಬಲದಿಂದಲೇ ಟೀಂ ಇಂಡಿಯಾ ಹೊರ ದೇಶಗಳಲ್ಲಿ ಗೆಲುವಿನ ಪತಾಕೆ ಹಾರಿಸಿದೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಟಿ ನಟರಾಜನ್ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಅಪಾಯಕಾರಿ ಬೌಲರ್ಗಳನ್ನು ಭಾರತ ಹೊಂದಿದೆ. ಈ ಬೌಲರ್ಗಳ ಆಧಾರದ ಮೇಲೆ ಮಾತ್ರ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಗೆಲ್ಲಲು ಸಾಧ್ಯ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.