ದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂಕುಸಿತಗಳು ಉಂಟಾಗುತ್ತಿದೆ. ಅಸ್ಸಾಂ ರಾಜ್ಯ ಅಕ್ಷರಶಃ ನಲುಗಿ ಹೋಗಿದೆ. ಧಾರಾಕಾರ ಮಳೆ ಸುರಿದು ಪ್ರವಾಹ ಬರುತ್ತಿದ್ದರೂ ಸಹ ತಿನ್ನಲು ಅನ್ನ, ಕುಡಿಯಲು ಪೂರಕವಾದ ನೀರು ಇಲ್ಲದೆ ಇಲ್ಲಿನ ಜನರು ಕಂಗಾಲಾಗಿದ್ದಾರೆ.
ಇನ್ನು ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲು ನಿಲ್ದಾಣದ ಬಳಿ ಭೀಕರ ಅವಘಡ ಸಂಭವಿಸಿದೆ. ಇಲ್ಲಿನ ಸೇನಾ ಕ್ಯಾಂಪ್ ಬಳಿ ಭೂಕುಸಿತ ಉಂಟಾಗಿದ್ದು, ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 45 ಭಾರತೀಯ ಸೇನಾ ಸಿಬ್ಬಂದಿ ಮತ್ತು ಹಲವರು ಕಣ್ಮರೆಯಾಗಿದ್ದಾರೆ.
ಇದನ್ನೂ ಓದಿ: Gold Price Today : ಇಂದು ಕೂಡಾ ಚಿನ್ನದ ಬೆಲೆಯಲ್ಲಿ ಇಳಿಕೆ , ಬೆಳ್ಳಿ ಕೂಡಾ ಭಾರೀ ಅಗ್ಗ
ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ 19 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಏಳು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ನೋನಿ ಜಿಲ್ಲೆಯ ಎಸ್‌ಡಿಒ ಸೊಲೊಮನ್ ಎಲ್ ಫಿಮೇಟ್ ಮಾಹಿತಿ ನೀಡಿದ್ದಾರೆ.
#WATCH | NDRF, SDRF, State Government and Railways workers involved in rescue work at the landslide-hit Tupul station building in Noney, Manipur
(Video credit: CPRO, NF Railway) pic.twitter.com/N7zo2pLaY7— ANI (@ANI) June 30, 2022
ಘಟನೆ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, "ತುಪುಲ್‌ನಲ್ಲಿ ಸಂಭವಿಸಿದ ಭೂಕುಸಿತದ ಬಗ್ಗೆ ಮಾಹಿತಿ ಪಡೆಯಲು ಮತ್ತು ಕ್ರಮದ ಬಗ್ಗೆ ಚರ್ಚಿಸಲು ತುರ್ತು ಸಭೆಯನ್ನು ಕರೆಯಲಾಗಿದೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ವೈದ್ಯರೊಂದಿಗೆ ಆಂಬ್ಯುಲೆನ್ಸ್‌ಗಳನ್ನು ಸಹ ಕಳುಹಿಸಲಾಗಿದೆ" ಎಂದು ಹೇಳಿದ್ದಾರೆ.
"Visited Tupul to take stock of unfortunate landslide situation. I’m thankful to Hon’ble HM Shri Amit Shah Ji for calling me to assess the situation & assured all possible assistance. A team of NDRF has already reached site for rescue operation," tweets CM Manipur, N Biren Singh pic.twitter.com/przrK9gp9L
— ANI (@ANI) June 30, 2022
ಅವಶೇಷಗಳಡಿಯಲ್ಲಿ ಅನೇಕ ಜನರು ಸಿಲುಕಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ನಿರ್ಮಾಣವಾಗಿದೆ.
ಜಿರಿಬಾಮ್‌ನಿಂದ ರಾಜಧಾನಿ ಇಂಫಾಲ್‌ಗೆ ರೈಲು ಮಾರ್ಗ ನಿರ್ಮಾಣವಾಗುತ್ತಿದ್ದ ಹಿನ್ನಲೆಯಲ್ಲಿ ಪ್ರಾದೇಶಿಕ 107 ಟೆರಿಟೋರಿಯಲ್ ಆರ್ಮಿ ಕ್ಯಾಂಪ್‌ನ್ನು ತುಪುಲ್‌ನಲ್ಲಿ ಸ್ಥಾಪಿಸಲಾಗಿತ್ತು. ಆದರೆ ದುರಾದೃಷ್ಟ ಎಂಬಂತೆ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: Vegetable Price: ತರಕಾರಿ ಬೆಲೆಯಲ್ಲಿ ಭಾರೀ ಏರಿಳಿತ: ಮತ್ತೆ ನಿಂಬೆ ದರ ಹೆಚ್ಚಳ!
ಸದ್ಯ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇನ್ನೂ 2 ತಂಡಗಳು ತುಪುಲ್‌ಗೆ ತೆರಳುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.