ಪ್ರಧಾನಿ ಭದ್ರತೆಯಲ್ಲಿ ಮತ್ತೆ ಲೋಪ: ಅದೃಷ್ಟವಶಾತ್‌ ತಪ್ಪಿದ ಭಾರೀ ದುರಂತ!

ಪಂಜಾಬ್‌ನಲ್ಲಿ ನಡೆದಿದ್ದ ಭದ್ರತಾ ಲೋಪದ ಬಳಿಕ ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದಂದು ಪ್ರತಿಮೆ ಅನಾವರಣ ಮಾಡಲು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. 

Written by - Bhavishya Shetty | Last Updated : Jul 5, 2022, 09:32 AM IST
  • ಪ್ರಧಾನಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಕಪ್ಪು ಬಲೂನ್‌ ಅಡ್ಡಿ
  • ಪಂಜಾಬ್‌ ಬಳಿಕ ಮತ್ತೆ ಭದ್ರತೆಯಲ್ಲಿ ಲೋಪ
  • ಬಲೂನ್‌ ಹಾರಿಬಿಟ್ಟ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ವಶಕ್ಕೆ
ಪ್ರಧಾನಿ ಭದ್ರತೆಯಲ್ಲಿ ಮತ್ತೆ ಲೋಪ: ಅದೃಷ್ಟವಶಾತ್‌ ತಪ್ಪಿದ ಭಾರೀ ದುರಂತ!  title=
Balloon

ಅಲ್ಲೂರಿ ಸೀತಾರಾಮ ರಾಜು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ  ಪ್ರಧಾನಿಯವರ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಸಂಭವಿಸಬಹುದಾದ ಭಾರೀ ದುರಂತವೊಂದು ತಪ್ಪಿದೆ. 

ಇದನ್ನೂ ಓದಿ: ಬೆಳ್ಳಂ‌ಬೆಳಿಗ್ಗೆ ಶಾಸಕ‌ ಜಮೀರ್‌ಗೆ ಎಸಿಬಿ ಶಾಕ್‌: ಮನೆ ಸೇರಿ ಐದು ಕಡೆ ಏಕಕಾಲಕ್ಕೆ ರೇಡ್‌

ಪಂಜಾಬ್‌ನಲ್ಲಿ ನಡೆದಿದ್ದ ಭದ್ರತಾ ಲೋಪದ ಬಳಿಕ ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದಂದು ಪ್ರತಿಮೆ ಅನಾವರಣ ಮಾಡಲು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಆದರೆ ಪ್ರಧಾನಿ ಭೇಟಿಗೆ ಕಾಂಗ್ರೆಸ್‌ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭಲ್ಲಿ ಕಪ್ಪು ಬಲೂನ್‍ಗಳನ್ನು ಹಾರಿ ಬಿಡಲಾಗಿತ್ತು. 

ಬಲೂನ್‌ಗಳು ಎಲ್ಲವೂ ಆಕಾಶದಲ್ಲಿ ಹಾರುತ್ತಿದ್ದವು. ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಸಿ ಹೊರಡಬೇಕು ಎಂದು ಹೆಲಿಕಾಪ್ಟರ್ ಹತ್ತಿದ್ದಾರೆ. ಆದರೆ ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆ ಪ್ರತಿಭಟನಾಕಾರರು ಹಾರಿಬಿಟ್ಟ ಬಲೂನ್ ಅಡ್ಡಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲೆಟ್ ಬಹುದೊಡ್ಡ ಅಪಾಯ ತಪ್ಪಿಸಿದ್ದಾರೆ. 

ಇದನ್ನೂ ಓದಿ: Indian Railways: ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಪ್ರಮುಖ ಬದಲಾವಣೆ

ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ:
ಪ್ರತಿಭಟನೆ ವೇಳೆ ಬಲೂನ್ ಹಾರಿಬಿಟ್ಟು ಸಮಸ್ಯೆ ಸೃಷ್ಟಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಕಂಡುಬರುತ್ತಿರುವುದು. 

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News