ಬೆಂಗಳೂರು: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಇಬ್ಬರೂ ಹಂತಕರನ್ನು ಬಂಧಿಸಲಾಗಿದೆ. ಗುರೂಜಿ ಕೊಲೆಯಾದ ಕೇವಲ 4 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಕೊಲೆಗಾರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಘಟಗಿ ಮೂಲದ ಮಹಾಂತೇಶ ಶಿರೂರು, ಮಂಜುನಾಥ ದುಮ್ಮವಾಡ ಬಂಧಿತ ಆರೋಪಿಗಳಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಚಂದ್ರಶೇಖರ್ ಗುರೂಜಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಭಕ್ತರ ಸೋಗಿನಲ್ಲಿ ಬಂದಿದ್ದ ಇಬ್ಬರು ಹಂತಕರು ಹಲವಾರು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು.
ಇದನ್ನೂ ಓದಿ: Big News: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ
ಗುರೂಜಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ದೃಶ್ಯವು ಹೋಟೆಲ್‍ನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹಂತಕರ ಬಂಧನಕ್ಕೆ ಖಾಕಿಪಡೆ ಬಲೆ ಬೀಸಿತ್ತು. ಅದರಂತೆ ರಾಮದುರ್ಗದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಕೊಲೆಯಾದ ಕೇವಲ 4 ಗಂಟೆಯಲ್ಲಿಯೇ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಮತ್ತು ರಾಮದುರ್ಗದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ರಾಮದುರ್ಗ ಡಿವೈಎಸ್‌ಪಿ ರಾಮನಗೌಡ ಹಟ್ಟಿ, ಸಿಪಿಐ ಐ.ಆರ್.ಪಟ್ಟಣಶೆಟ್ಟಿ, ಪಿಎಸ್ಐ ಶಿವಾನಂದ ಕಾರಜೋಳ ನೇತೃತ್ವದಲ್ಲಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಫೋನ್ ಲೋಕೇಶನ್ ಆಧಾರದಲ್ಲಿ ಆರೋಪಿಗಳ ಸೆರೆ ಹಿಡಿಯಲಾಗಿದ್ದು, ಆರೋಪಿಗಳನ್ನು ಹುಬ್ಬಳ್ಳಿಗೆ ಕರೆದೊಯ್ಯುಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ
ಚೇಸ್ ಮಾಡಿ ಹಂತಕರನ್ನು ಹಿಡಿದ ಪೊಲೀಸರು
ಚಂದ್ರಶೇಖರ್ ಗುರೂಜಿಯನ್ನು ಬರ್ಬರವಾಗಿ ಹತ್ಯೆಗೈದು ಆರೋಪಿಗಳು ಕಾರಿನಲ್ಲಿ ಎಸ್ಕೇಪ್ ಆಗಿದ್ದರು. ಆರೋಪಿಗಳನ್ನು ಚೇಸ್ ಮಾಡಿ ರಾಮದುರ್ಗದ ಬಳಿ ಬಂಧಿಸಲಾಗಿದೆ. ಹುಬ್ಬಳ್ಳಿ ಪೊಲೀಸರ ಜೊತೆ ಕೈಜೋಡಿಸಿದ್ದ ರಾಮದುರ್ಗ ಪೊಲೀಸರು ಜಂಟಿ ಕಾರ್ಯಾಚರಣೆ ಮೂಲಕ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ವಾಸ್ತು ಜೋತಿಷ್ಯದಿಂದ ನೊಂದವರಿಂದಲೇ ಚಂದ್ರಶೇಖರ್ ಗುರೂಜಿ ಹತ್ಯೆ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ