ಜುಲೈ 7 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಯಲ್ಲಿ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಹೊತ್ತುಕೊಂಡಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿ ಇದೀಗ ಚೇತರಿಸಿಕೊಂಡಿದ್ದು, ಮತ್ತೆ ತಂಡದ ನಾಯಕತ್ವದ ಜವಾಬ್ದಾರಿ ಹೊರಲಿದ್ದಾರೆ. ಇದಕ್ಕಾಗಿ ರೋಹಿತ್ ತಂಡದೊಂದಿಗೆ ತಯಾರಿ ಆರಂಭಿಸಿದ್ದಾರೆ. ಇನ್ನು ರೋಹಿತ್ ನಾಯಕತ್ವದಲ್ಲಿ ಯುವ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: ನೂಪುರ್ ಶರ್ಮಾಗೆ ಬೆದರಿಕೆ ಹಾಕಿದ ಆರೋಪ: ಅಜ್ಮೀರ್ ದರ್ಗಾದ ಮೌಲ್ವಿ ಸಲ್ಮಾನ್ ಚಿಸ್ತಿ ಬಂಧನ
ಸರಣಿಯ ಮೊದಲ ಪಂದ್ಯ ರೋಸ್ ಬಾಲ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಯುವ ವೇಗಿ ಅರ್ಷದೀಪ್ ಸಿಂಗ್ ಟೀಂ ಇಂಡಿಯಾ ಪರ ಮೊದಲ ಪಂದ್ಯ ಆಡಲಿದ್ದಾರೆ. ಐಪಿಎಲ್ 2022ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಅರ್ಶದೀಪ್, ಆ ಬಳಿಕ ಸುದ್ದಿಯಲ್ಲಿದ್ದಾರೆ. ಆದರೆ ಅವರಿಗೆ ಇನ್ನೂ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ರೋಹಿತ್ ನಾಯಕತ್ವದಲ್ಲಿ ಅರ್ಷದೀಪ್ ಟಿ20ಯಲ್ಲಿ ತಂಡದಲ್ಲಿ ಸ್ಥಾನ ಪಡೆಯಬಹುದು. ಅಷ್ಟೇ ಅಲ್ಲದೆ, ಅರ್ಷದೀಪ್ ಅವರ ಅದೃಷ್ಟ ರೋಹಿತ್ ನಾಯಕತ್ವದಲ್ಲಿ ಖುಲಾಯಿಸುತ್ತದೆಯೋ ಎಂಬುದನ್ನು ಕಾದುನೋಡಬೇಕಿದೆ.
ಈ ಹಿಂದೆ ನಡೆದ ಎರಡು ವಿದೇಶಿ ಪ್ರವಾಸದಲ್ಲಿ ಅರ್ಷದೀಪ್‌ರನ್ನು ಕಡೆಗಣಿಸಲಾಗಿತ್ತು. ರಿಷಬ್ ಪಂತ್ ನಾಯಕತ್ವದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 5 ಪಂದ್ಯಗಳ ಟಿ20 ಸರಣಿಯಲ್ಲಿ ಅರ್ಷದೀಪ್ ಸಿಂಗ್ ಮೈದಾನಕ್ಕೆ ಇಳಿಯಲೇ ಇಲ್ಲ. ಅಷ್ಟೇ ಅಲ್ಲದೆ, ಇತ್ತೀಚಿನ ಐರ್ಲೆಂಡ್ ಪ್ರವಾಸದಲ್ಲಿಯೂ ಸಹ ಟೀಮ್ ಇಂಡಿಯಾದ ಭಾಗವಾಗಿದ್ದ ಅವರಿಗೆ ಅವಕಾಶವನ್ನೇ ನೀಡಲಿಲ್ಲ. ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅರ್ಷದೀಪ್‌ರನ್ನು ಕಡೆಗಣಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಅರ್ಷದೀಪ್ ಸಿಂಗ್ ಅವರನ್ನು ಜಸ್ಪ್ರೀತ್ ಬುಮ್ರಾ ಅವರಂತೆ ಮಾರಕ ಬೌಲರ್ ಎಂದು ಪರಿಗಣಿಸಲಾಗಿದೆ. ಐಪಿಎಲ್ 2022ರಲ್ಲಿ, ಅವರು ತಮ್ಮ ವೇಗ ಮತ್ತು ಮಾರಕ ಯಾರ್ಕರ್‌ನಿಂದಾಗಿ ಕ್ರಿಕೆಟ್ ದಿಗ್ಗಜರ ಗಮನ ಸೆಳೆದಿದ್ದರು. ಆ ಬಳಿಕ ಆಯ್ಕೆಗಾರರು ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಿದ್ದಾರೆ. ಅರ್ಷದೀಪ್ ಐಪಿಎಲ್ 2022 ರಲ್ಲಿ 14 ಪಂದ್ಯಗಳನ್ನು ಆಡಿದ್ದು, 7.70 ರ ಎಕಾನಮಿಯಲ್ಲಿ 10 ವಿಕೆಟ್‌ಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ: ಭಾರೀ ಮಳೆ ಹಿನ್ನೆಲೆ: ರಾಜ್ಯದ ಈ ಜಿಲ್ಲೆಯಲ್ಲಿ ಜುಲೈ 9ರವರೆಗೆ ರಜೆ ಘೋಷಣೆ!
ಟಿ20 ಸರಣಿಗೆ ಭಾರತ ತಂಡ:
ಮೊದಲನೇ ಟಿ20: ರೋಹಿತ್ ಶರ್ಮಾ (ನಾಯಕ), ರಿತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ದಿನೇಶ್ ಕಾರ್ತಿಕ್, ವೆಂಕಟೇಶ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಸಿಂಗ್ ಮಲಿಕ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್.
2ನೇ ಮತ್ತು 3ನೇ ಟಿ20: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪಿ ಬಿಶ್ನೋ ಪಟೇಲ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಅವೇಶ್ ಖಾನ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.