ಬೆಂಗಳೂರು : ರಾಜ್ಯಾದ್ಯಂತ ಮುಂದುವರೆದ ಮಳೆ ಆರ್ಭಟ ಜೋರಾಗಿದೆ, ಕರಾವಳಿ ಭಾಗದಲ್ಲಿ ಇನ್ನೂ 5 ದಿನ ಭಾರಿ ಮಳೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಎರಡು ಮೂರುದಿನದಿಂದ ಬಹುತೇಕ ಭಾಗದಲ್ಲಿ ಮಳೆಯಾಗಿದೆ. ನಿನ್ನೆ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 21 ಸಿಎಂ ಮಳೆಯಾಗಿದೆ. ರಾಜ್ಯದ 22 ಭಾಗದಲ್ಲಿ ಭಾರಿ ಮಳೆಯಾಗಿದೆ.
ಮಹಾರಾಷ್ಟ್ರದ ದಕ್ಷಿಣ ಕರಾವಳಿಯಿಂದ ಕೇರಳದ ಉತ್ತರ ಕರಾವಳಿಯಲ್ಲಿ ಗಾಳಿ ಬೀಸುತ್ತಿದೆ. ಇದೇ ರಾಜ್ಯದಲ್ಲಿ ಭಾರಿ ಮಳೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಬ್ಬರು ವ್ಯಕ್ತಿಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೆ ಅವರ ಮನೆಯ ಒಂದು ಭಾಗವು ಕುಸಿದು ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಪಾಲ್ಘರ್ನ ವಿವಿಧ ತಾಲೂಕುಗಳಲ್ಲಿ ಕನಿಷ್ಠ 32 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 89.27 ಮಿ.ಮೀ ಮಳೆಯಾಗಿದ್ದು, ವಾಡಾ ತಾಲೂಕಿನಲ್ಲಿ ಗರಿಷ್ಠ 135 ಮಿ.ಮೀ ಮಳೆಯಾಗಿದೆ.
ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ರಾಜ್ಯದ ಅಧಿಕಾರಿಗಳು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. "ಕೊಡಗು, ಕಾರವಾರ ಮತ್ತು ಉಡುಪಿಯಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನಿಯೋಜಿಸಲಾಗಿದೆ" ಎಂದು ತಿಳಿಸಿದರು.
ರಾಯಗಡ, ರತ್ನಗಿರಿ, ಪುಣೆ ಮತ್ತು ಕೊಲ್ಲಾಪುರ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ರೆಡ್ ಅಲರ್ಟ್ ಘೋಷಿಸಿದೆ. ಏತನ್ಮಧ್ಯೆ, ಥಾಣೆ ಮತ್ತು ಮುಂಬೈ ಜುಲೈ 10 ರವರೆಗೆ ಆರೆಂಜ್ ಅಲರ್ಟ್ನಲ್ಲಿದೆ. ಕರ್ನಾಟಕದ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ