ತಂಡಕ್ಕೆ ಮರಳಿದ ಜಡೇಜಾ: ಈ ಆಟಗಾರನ ವೃತ್ತಿಜೀವನಕ್ಕೆ ಕುತ್ತು!

ರವೀಂದ್ರ ಜಡೇಜಾ ಮೊದಲ ಟಿ20ಯಲ್ಲಿ ತಂಡದ ಭಾಗವಾಗಿರಲಿಲ್ಲ. ಆದರೆ ಮುಂಬರುವ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದು, ಟಿ20 ವಿಶ್ವಕಪ್‌ನಲ್ಲೂ ತಂಡದ ಮೊದಲ ಆಯ್ಕೆಯಾಗಲಿದ್ದಾರೆ. ಈ ಎಲ್ಲಾ ಲೆಕ್ಕಾಚಾರ ನೋಡಿದ್ರೆ, ಎರಡನೇ ಟಿ20ಯಲ್ಲಿ ಅವರ ಆಟ ಬಹುತೇಕ ಖಚಿತವಾಗಿದೆ. ಇನ್ನು ಇವರ ಆಗಮನದಿಂದ ಯುವ ಆಲ್‌ರೌಂಡರ್‌ಗೆ ಅಪಾಯ ಹೆಚ್ಚಾಗಲಿದೆ.   

Written by - Bhavishya Shetty | Last Updated : Jul 9, 2022, 11:15 AM IST
  • ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರವೀಂದ್ರ ಜಡೇಜಾಗೆ ಸ್ಥಾನ
  • ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಹಲವು ಬದಲಾವಣೆ
  • ಜಡೇಜಾ ಸ್ಥಾನ ಪಡೆದರೆ ಆಲ್ ರೌಂಡರ್ ಅಕ್ಷರ್ ಪಟೇಲ್‌ಗೆ ಸಂಕಷ್ಟ!
ತಂಡಕ್ಕೆ ಮರಳಿದ ಜಡೇಜಾ: ಈ ಆಟಗಾರನ ವೃತ್ತಿಜೀವನಕ್ಕೆ ಕುತ್ತು!  title=
Ind Vs Eng

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ಎರಡನೇ ಟಿ20 ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದ್ದರೆ, ಇಂಗ್ಲೆಂಡ್ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಉಳಿಯಲು ಬಯಸುತ್ತಿದೆ. ಹಿರಿಯ ಆಟಗಾರರು ತಂಡಕ್ಕೆ ವಾಪಸ್ಸಾಗಿರುವುದರಿಂದ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಹಲವು ಬದಲಾವಣೆಗಳು ಕಂಡುಬರಲಿದ್ದು, ಈ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಹೆಸರೂ ಸೇರಿದೆ.

ಇದನ್ನೂ ಓದಿ: Arecanut Price: ಮಂಗಳೂರು, ದಾವಣಗೆರೆ & ತುಮಕೂರು ಮಾರುಕಟ್ಟೆಯ ಇಂದಿನ ಅಡಿಕೆ ಧಾರಣೆ

ರವೀಂದ್ರ ಜಡೇಜಾ ಮೊದಲ ಟಿ20ಯಲ್ಲಿ ತಂಡದ ಭಾಗವಾಗಿರಲಿಲ್ಲ. ಆದರೆ ಮುಂಬರುವ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದು, ಟಿ20 ವಿಶ್ವಕಪ್‌ನಲ್ಲೂ ತಂಡದ ಮೊದಲ ಆಯ್ಕೆಯಾಗಲಿದ್ದಾರೆ. ಈ ಎಲ್ಲಾ ಲೆಕ್ಕಾಚಾರ ನೋಡಿದ್ರೆ, ಎರಡನೇ ಟಿ20ಯಲ್ಲಿ ಅವರ ಆಟ ಬಹುತೇಕ ಖಚಿತವಾಗಿದೆ. ಇನ್ನು ಇವರ ಆಗಮನದಿಂದ ಯುವ ಆಲ್‌ರೌಂಡರ್‌ಗೆ ಅಪಾಯ ಹೆಚ್ಚಾಗಲಿದೆ. 

ರವೀಂದ್ರ ಜಡೇಜಾ ತಂಡಕ್ಕೆ ವಾಪಸಾದ ಬಳಿಕ ಆಲ್ ರೌಂಡರ್ ಅಕ್ಷರ್ ಪಟೇಲ್‌ಗೆ ಸಿಗೋ ಅವಕಾಶ ಮಿಸ್‌ ಆಗಬಹುದು. ಅಕ್ಷರ್ ಪಟೇಲ್ ಮೊದಲ ಟಿ20ಯಲ್ಲಿ ತಂಡದ ಭಾಗವಾಗಿದ್ದರು. ಆದರೆ ಹೇಳಿಕೊಳ್ಳುವಂತಹ ಯಾವುದೇ ಪ್ರದರ್ಶನ ಅವರು ನೀಡಿಲ್ಲ. ಕಳೆದ ಕೆಲವು ಪಂದ್ಯಗಳಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇದೀಗ ಅಕ್ಷರ್ ಪಟೇಲ್ ಬದಲಿಗೆ ರವೀಂದ್ರ ಜಡೇಜಾ ಅವರನ್ನು ಪ್ಲೇಯಿಂಗ್‌ ಇಲೆವೆನ್‌ಗೆ ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. 

ರೋಹಿತ್ ಶರ್ಮಾ ಆಟ ಮೊದಲ ಟಿ20ಯಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಆದರೆ ಅಕ್ಷರ್ ಪಟೇಲ್ ಕೇವಲ 12 ಬಾಲ್‌ಗೆ 17 ರನ್ ಬಾರಿಸಿದ್ದರು. ಇನ್ನು ಬೌಲಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿರಲಿಲ್ಲ. 

ಇದನ್ನೂ ಓದಿ: Shani Transit 2022: ಶನಿಯ ಅನುಗ್ರಹದಿಂದ ಈ ರಾಶಿಯವರು 6 ತಿಂಗಳಲ್ಲಿ ಶ್ರೀಮಂತರಾಗುತ್ತಾರೆ..!

ಇಂಗ್ಲೆಂಡ್ ವಿರುದ್ಧ ಜಡೇಜಾ ಇನ್ನಿಂಗ್ಸ್: 
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ 194 ಎಸೆತಗಳಲ್ಲಿ 13 ಬೌಂಡರಿಗಳ ಸಹಾಯದಿಂದ 104 ರನ್ ಬಾರಿಸಿದ್ದರು. ಇದು ಅವರ ಟೆಸ್ಟ್ ವೃತ್ತಿಜೀವನದ ಮೂರನೇ ಶತಕವಾಗಿದೆ. ಈ ಇನ್ನಿಂಗ್ಸ್‌ನಲ್ಲಿ ರಿಷಬ್ ಪಂತ್ ಜೊತೆಗೆ 222 ರನ್‌ಗಳ ಜೊತೆಯಾಟವನ್ನು ಆಡಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News