ನವದೆಹಲಿ: ರಫೇಲ್ ಒಪ್ಪಂದ ಬಹುದೊಡ್ಡ ಹಗರಣ ಎಂದು ಹಲವು ರಾಜಕೀಯ ನಾಯಕರು ಬಣ್ಣಿಸಿದ್ದಾರೆ. ರಫೇಲ್ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿಯವರ ಮೌನವನ್ನು ಕಾಂಗ್ರೆಸ್ ನಿರಂತರವಾಗಿ ಪ್ರಶ್ನಿಸುತ್ತಾ ಬಂದಿದೆ. ರಫೇಲ್ ಡೀಲ್ ಅಂದ್ರೆ ಏನು? ಈ ಬಗ್ಗೆ ಕಾಂಗ್ರೆಸ್ ಪಕ್ಷ ಮಂಗಳವಾರ ಒಂದು ಸಣ್ಣ ವಿಡಿಯೋವನ್ನು ಪ್ರಕಟಿಸಿದೆ. ಅದರಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ವಿವಾದಾತ್ಮಕ ಫೈಟರ್ ಜೆಟ್ ವ್ಯವಹಾರದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವ ಭರವಸೆಯನ್ನು ನೀಡಿದೆ.
ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ಟೀಸರ್ ಅನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್, ರಫೆಲ್ ಡೀಲ್ ಬಗ್ಗೆ ತಿಳಿಯಲು ಕಾಂಗ್ರೆಸ್ ನ ಅಧಿಕೃತ ಟ್ವಿಟ್ಟರ್ ಖಾತೆಯ ಮೇಲೆ ಕಣ್ಣಿಡುವಂತೆ ತಿಳಿಸಿದೆ.
What 'really' is the Rafale deal? NOT for dummies. Here's the teaser, stay tuned for more later today... pic.twitter.com/5p2lj9xOhY
— Congress (@INCIndia) August 14, 2018
ನಿನ್ನೆ(ಆಗಸ್ಟ್ 13) ಬೀದರ್ ನಲ್ಲಿ ನಡೆದ 'ಜನದನಿ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಯುಪಿಎ ಸರ್ಕಾರ ಫ್ರಾನ್ಸ್ ನಿಂದ ಪ್ರತಿ ರಾಫೆಲ್ ಯುದ್ಧ ವಿಮಾನವನ್ನು ರೂ.565 ಕೋಟಿ ರೂ.ಗಳಿಗೆ ಕೊಳ್ಳುವ ಇಂಗಿತ ವ್ಯಕ್ತ ಪಡಿಸಿತ್ತು. ಆದರೆ, ಮೋದಿ ಸರ್ಕಾರ ಈಗ ರೂ. 1,600 ಕೋಟಿ ರೂ.ಗಳಿಗೆ ಕೊಳ್ಳಲು ಹೊರಟಿದೆ ಎಂದು ಆರೋಪಿಸಿದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯಾವುದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಸಿದ್ದ. ಮೋದಿ ಅವರಿಗೆ ಧೈರ್ಯವಿದ್ದರೆ ನನ್ನೊಂದಿಗೆ ಚರ್ಚೆಗೆ ಬರಲಿ ಎಂದು ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಸವಾಲೆಸೆದಿದ್ದರು.