Cold Milk With Honey: ತೂಕ ನಷ್ಟಕ್ಕೆ ತಣ್ಣನೆಯ ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯಿರಿ

Cold Milk With Honey: ಹಾಲು ಮತ್ತು ಜೇನುತುಪ್ಪ ಅನೇಕ ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿರುವ ಆಹಾರವಾಗಿದೆ. ಇದು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಆದರೆ ಎರಡನ್ನೂ ಒಟ್ಟಿಗೆ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. 

Written by - Chetana Devarmani | Last Updated : Jul 12, 2022, 06:23 PM IST
  • ಹಾಲು ಮತ್ತು ಜೇನುತುಪ್ಪ ಅನೇಕ ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದೆ
  • ತೂಕ ನಷ್ಟಕ್ಕೆ ತಣ್ಣನೆಯ ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯಿರಿ
  • ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯುವುದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ
Cold Milk With Honey: ತೂಕ ನಷ್ಟಕ್ಕೆ ತಣ್ಣನೆಯ ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯಿರಿ title=
ಹಾಲು ಮತ್ತು ಜೇನುತುಪ್ಪ

Cold Milk With Honey: ಹಾಲು ಮತ್ತು ಜೇನುತುಪ್ಪ ಅನೇಕ ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿರುವ ಆಹಾರವಾಗಿದೆ. ಇದು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಆದರೆ ಎರಡನ್ನೂ ಒಟ್ಟಿಗೆ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯುವುದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲೂ ತಣ್ಣನೆಯ ಹಾಲಿನಲ್ಲಿ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಹಲವಾರು ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಈ ಸಂಕೇತಗಳು ಸರ್ವಿಕಲ್ ಕ್ಯಾನ್ಸರ್ ನ ಲಕ್ಷಣಗಳಾಗಿರಬಹುದು ..!

ತಣ್ಣನೆಯ ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯುವುದರಿಂದ ಆಗುವ ಪ್ರಯೋಜನಗಳು:

ಗ್ಯಾಸ್ ಸಮಸ್ಯೆ ನಿವಾರಣೆ: ತಣ್ಣನೆಯ ಹಾಲನ್ನು ಜೇನುತುಪ್ಪದೊಂದಿಗೆ ಬೆರೆಸಿ ಕುಡಿದರೆ ಹೊಟ್ಟೆಯಲ್ಲಿ ಗ್ಯಾಸ್ ಟ್ರಬಲ್‌ ನಿವಾರಣೆಯಾಗುತ್ತದೆ. ಅಸಿಡಿಟಿ ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಹೊಟ್ಟೆಯ ಹುಣ್ಣುಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಹಾಲಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಕುಡಿಯುವುದರಿಂದ ದೇಹವು ಫ್ರಕ್ಟೋಸ್ ಅನ್ನು ಹೀರಿಕೊಳ್ಳುತ್ತದೆ. ಇದರಿಂದಾಗಿ ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸುತ್ತದೆ.

ತ್ವರಿತ ಶಕ್ತಿಯನ್ನು ಪಡೆಯಿರಿ: ವ್ಯಾಯಾಮದ ನಂತರ ತಣ್ಣನೆಯ ಹಾಲನ್ನು ಜೇನುತುಪ್ಪದೊಂದಿಗೆ ಬೆರೆಸಿ ಕುಡಿದರೆ ಅದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಇದರೊಂದಿಗೆ, ಸ್ನಾಯುವಿನ ಆಯಾಸವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಚಿಯಾ ಬೀಜಗಳಿಂದ ಸಿಗುತ್ತೆ ಪರಿಹಾರ

ತೂಕ ನಷ್ಟಕ್ಕೆ ಸಹಾಯಕ: ಹಾಲಿಗೆ ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ತೂಕ ಇಳಿಕೆಗೂ ಸಹಕಾರಿ. ಇದು ನಿಮ್ಮ ಚಯಾಪಚಯವನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ, ನಿಮ್ಮ ಚಯಾಪಚಯ ಸರಿಯಾಗಿ ಕಾರ್ಯನಿರ್ವಹಿಸಿದಾಗ ಅದು ಕ್ಯಾಲೊರಿಗಳನ್ನು ಸುಡುತ್ತದೆ. ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಲು ಮತ್ತು ಜೇನುತುಪ್ಪದ ಸಂಯೋಜನೆಯು ದೀರ್ಘಕಾಲದವರೆಗೆ ಹಸಿವಾಗದಂತೆ ತಡೆಯಲು ಸಹಾಯ ಮಾಡುತ್ತದೆ.  

(Disclaimer: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News