ತಿರುವಂತಪುರಂ: ಮುಂಗಾರಿನ ಅಬ್ಬರಕ್ಕೆ ದೇವರನಾಡು ಕೇರಳ ತತ್ತರಿಸಿದೆ. ಕೇರಳದ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಡುಕ್ಕಿ, ವಯನಾಡ್, ಮಲಪ್ಪುರಂ, ಕಂಜೂರ್, ಎರ್ನಾಕುಲಂ, ಕಣ್ಣೂರು, ಕಲ್ಲಿಕೋಟೆ, ಪಾಲಕ್ಕಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಡಬಿಡದೆ ಸುರಿಯುತ್ತಿರುವ ಮಳೆ, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು ಕೇರಳದ ನಿವಾಸಿಗಳಿಗೆ ದುಃಸ್ವಪ್ನವಾಗಿದ್ದು, ಇಂದೂ ಸಹ ವರುಣ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ರಾಜ್ಯದ ಎಂಟು ಜಿಲ್ಲೆಗಳಿಗೆ ಗುರುವಾರದವರೆಗೂ ರೆಡ್ ಅಲರ್ಟ್ ಘೋಷಿಸಿದೆ.
ಮಳೆ ಹಾಗೂ ಪ್ರವಾಹದಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಇತ್ತ ಇಡುಕ್ಕಿ ಡ್ಯಾಂನಿಂದಲೂ ನೀರು ಬಿಡುವ ಪ್ರಕ್ರಿಯೆ ಮುಂದುವರೆದಿದ್ದು, ಎಲ್ಲ ಐದೂ ಗೇಟ್ ಗಳನ್ನು ತೆರೆದು ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇಲ್ಲಿ ಪ್ರತೀ ಒಂದು ಸೆಕೆಂಡಿಗೆ 8.5 ಲಕ್ಷ ಲೀಟರ್ ನೀರನ್ನು ಡ್ಯಾಂನಿಂದ ಹೊರಗೆ ಬಿಡಲಾಗುತ್ತಿದೆ.