Vice President Election 2022: NDA ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ಒಂದು ದಿನ ಬಳಿಕ ವಿಪಕ್ಷಗಳೂ ಕೂಡ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿವೆ. ಮಾರ್ಗಾರೆಟ್ ಆಳ್ವಾ ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ಎಲ್ಲಾ ಪ್ರತಿಪಕ್ಷಗಳ ಸಭೆಯ ಬಳಿಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗಾರೆಟ್ ಆಳ್ವಾ ಅವರ ಹೆಸರಿನ ಘೋಷಣೆ ಮಾಡಿದ್ದಾರೆ. ಇದಕ್ಕೂ ಮುನ್ನ ದೆಹಲಿಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ, ಶಿವಸೇನೆ ಮುಖಂಡ ಸಂಜಯ್ ರಾವುತ್ ಮತ್ತಿತರರು ಉಪಸ್ಥಿತರಿದ್ದರು.
Delhi | Opposition's candidate for the post of Vice President of India to be Margaret Alva: NCP chief Sharad Pawar pic.twitter.com/qkwyf7FMOw
— ANI (@ANI) July 17, 2022
ಈ ಸಭೆಯಲ್ಲಿ ಉಪರಾಷ್ಟ್ರಪತಿ ಚುನಾವಣೆ ಹಾಗೂ ಮುಂಬರುವ ಸಂಸತ್ತಿನ ಅಧಿವೇಶನದ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಸಭೆಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಮಾರ್ಗರೆಟ್ ಆಳ್ವ ಅವರ ಹೆಸರನ್ನು ಘೋಷಿಸಿದ್ದಾರೆ. ಈ ಸರ್ವಾನುಮತದ ನಿರ್ಣಯದಲ್ಲಿ ಒಟ್ಟು 17 ಪಕ್ಷಗಳು ಭಾಗಿಯಾಗಿವೆ ಎಂದು ಅವರು ಹೇಳಿದ್ದಾರೆ.
19ರಂದು ನಾಮಪತ್ರ ಸಲ್ಲಿಕೆ
ವಿರೋಧ ಪಕ್ಷಗಳ ಸಭೆಯ ನಂತರ ಶರದ್ ಪವಾರ್ ಅವರು ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವ ಅವರು ವಿರೋಧ ಪಕ್ಷದಿಂದ ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ಅವರು 19ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಸಭೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು ಆದರೆ ಅವರ ಸಾಧ್ಯವಾಗಲಿಲ್ಲ ಎಂದು ಹೇಳಲಾಗುತ್ತಿದೆ. ವಿರೋಧ ಪಕ್ಷದ ಅಭ್ಯರ್ಥಿಗೆ ಇದುವರೆಗೆ 17 ಪಕ್ಷಗಳ ಬೆಂಬಲವಿದೆ.
ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ
ಈ ಕುರಿತು ಹೇಳಿಕೆ ನೀಡಿರುವ ಶರದ್ ಪವಾರ್, "ನಾವು ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಕಳೆದ ಬಾರಿ ಅವರು ನಮ್ಮ ಜಂಟಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸಿದ್ದರು" ಎಂದು ಹೇಳಿದ್ದಾರೆ. ಮತ್ತೊಂದೆಡೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜೊತೆ ಇರಲು ಶಿವಸೇನೆ ನಿರ್ಧರಿಸಿದೆ. ಈ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಂದಾಗಿವೆ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
ಇದನ್ನೂ ಓದಿ-Vice Presidential Election 2022: ಯಾರು ಈ ಜಗದೀಪ್ ಧನಕರ್?
ಉಪರಾಷ್ಟ್ರಪತಿ ಚುನಾವಣೆ ಯಾವಾಗ ನಡೆಯಲಿದೆ?
ಇದಕ್ಕೂ ಒಂದು ದಿನ ಮುನ್ನ ಬಿಜೆಪಿಯು ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕಡ್ ಅವರನ್ನು NDA ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಜಗದೀಪ್ ಧನ್ಕಡ್ ಅವರ ಹೆಸರನ್ನು ಘೋಷಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.
ಇದನ್ನೂ ಓದಿ-Vice President Election 2022: ಮತ್ತೊಮ್ಮೆ ಭಾರಿ ಅಚ್ಚರಿ ಮೂಡಿಸುವ ನಿರ್ಧಾರ ಕೈಗೊಂಡ ಬಿಜೆಪಿ
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ