ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ : ಶೀಘ್ರ ಸಿಗಲಿದೆ ಶಿಕ್ಷಕಿ ಸ್ಥಾನಮಾನ

ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಗೂ ಶಿಕ್ಷಕರ ಸ್ಥಾನಮಾನ ಸಿಗಲಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರು ಎಂದು ಪರಿಗಣಿಸುವಂತೆ  ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. 

Written by - Ranjitha R K | Last Updated : Jul 19, 2022, 10:22 AM IST
  • ಅಂಗನವಾಡಿ ಕಾರ್ಯಕರ್ತೆಯರಿಗೂ ಶಿಕ್ಷಕರ ಸ್ಥಾನಮಾನ
  • 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
  • ಕರ್ನಾಟಕದಲ್ಲಿಯೂ ಉತ್ತರಾಖಂಡ ಮಾದರಿ
 ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ : ಶೀಘ್ರ  ಸಿಗಲಿದೆ  ಶಿಕ್ಷಕಿ ಸ್ಥಾನಮಾನ  title=
anganavadi workers (file photo)

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೊಂದು ಸಿಹಿ ಸುದ್ದಿ. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ.  ಈ ಮೂಲಕ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ  ಶಿಕ್ಷಕರ ಸ್ಥಾನಮಾನ ಸಿಗಲಿದೆ. 

ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಗೂ ಶಿಕ್ಷಕರ ಸ್ಥಾನಮಾನ ಸಿಗಲಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರು ಎಂದು ಪರಿಗಣಿಸುವಂತೆ  ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಉತ್ತರಕಾಂಡ ರಾಜ್ಯದಲ್ಲಿ ಈ ಯೋಜನೆಯನ್ನು  ಈಗಾಗಲೇ ಅನುಷ್ಠಾನಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಈ ಯೋಜನೆ ಜಾರಿಗೊಳಿಸಲು ನಿರ್ಧಾರ ಮಾಡಲಾಗಿದೆ. 

ಇದನ್ನೂ ಓದಿ : Vegetable Price: ಹೇಗಿದೆ ಗೊತ್ತಾ ಈರುಳ್ಳಿ, ಟೊಮ್ಯಾಟೋ ಬೆಲೆ? ಇಲ್ಲಿದೆ ತರಕಾರಿ ದರದ ಸಂಪೂರ್ಣ ವಿವರ

ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರೆಂದು ಪರಿಗಣಿಸಿದ್ದಲ್ಲಿ ಅವರು ಪಡೆಯುತ್ತಿರುವ ಗೌರವ ಧನ, ವೇತನವಾಗಿ ಬದಲಾಗಲಿದೆ. ಜೊತೆಗೆ ಸೇವಾ ಭದ್ರತೆಯೂ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ ಸ್ವರೂಪ ನೀಡಲು ಯೋಜನೆ ಮಾಡಲಾಗುತ್ತಿದೆ. 

ಇಲ್ಲಿವರೆಗೆ ಅಂಗನವಾಡಿ ಕಾರ್ಯಕರ್ತೆಯರು 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು. ಮಾತ್ರವಲ್ಲ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, ಪೌಷ್ಟಿಕ ಆಹಾರ ವಿತರಣೆ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ಇವರನ್ನು ಬಳಸಿಕೊಳ್ಳಲಾಗುತ್ತಿತ್ತು

ಇದನ್ನೂ ಓದಿ : Relief: ಹಾಲಿನ ಉತ್ಪನ್ನಗಳ ದರ ಇಳಿಕೆ ಮಾಡಿ ಆದೇಶ ಹೊರಡಿಸಿದ ಕೆಎಂಎಫ್ ಎಂಡಿ, ಯಾವುದರ ಬೆಲೆಯಲ್ಲಿ ಎಷ್ಟು ಇಳಿಕೆ?

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News