ಬೆಂಗಳೂರು : ಕೋಟ್ಯಾಂತರ ರೂಪಾಯಿ ಮೌಲ್ಯದ ಸಾವಿರಾರು ಕೆಜಿ ರಕ್ತಚಂದನ ತುಂಡುಗಳನ್ನು ಫಾರ್ಮ್ ಹೌಸ್ ನ ನೀರಿನ ಸಂಪ್ ನಲ್ಲಿ ಶೇಖರಿಸಿಟ್ಟಿದ್ದ ಆರೋಪದಡಿ ಓರ್ವನನ್ನು ಬಂಧಿಸಲಾಗಿದೆ. ತಮಿಳುನಾಡು ಮೂಲದ ವಿನೋದ್ ಬಂಧಿತ ಆರೋಪಿ. ಅರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ವಿನೋದ್ ಹೆಸರಘಟ್ಟದ ಫಾರ್ಮ್ ಹೌಸ್ ನಲ್ಲಿ ಕಳೆದ 15 ದಿನಗಳಿಂದ ಕೆಲಸ ಮಾಡುತ್ತಿದ್ದ. ಜುಲೈ 22 ರಂದು ವಿನೋದ್ ಹಾಗೂ ಅಜಯ್ ಎಂಬುವರು ಸ್ಯಾಟ್ಲೈಟ್ ಬಸ್ ನಿಲ್ದಾಣದ ನ್ಯೂ ಟಿಂಬರ್ ಲೇಔಟ್ ನಲ್ಲಿ 113 ಕೆಜಿ ಮೌಲ್ಯದ ರೆಡ್ ಸ್ಯಾಂಡಲ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ಸ್ ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದ ತಂಡ ಇಬ್ಬರು ಆರೋಪಿಗಳ ಪೈಕಿ ವಿನೋದ್ ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ನಗರ ಪ್ರದೇಶಗಳ ಸವಾಲುಗಳಿಗೆ ಪರಿಹಾರ ಅಗತ್ಯ: ಸಚಿವ ಅಶ್ವತ್ಥ್ ನಾರಾಯಣ
ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಹೆಸರಘಟ್ಟದ ಫಾರ್ಮ್ ಹೌಸ್ ನಲ್ಲಿ ನೀರಿಲ್ಲದ ಸಂಪ್ ನಲ್ಲಿ ಬಚ್ಚಿಟ್ಟಿದ್ದ ಒಟ್ಟು 2.68 ಕೋಟಿ ಮೌಲ್ಯದ 1693 ರಕ್ತಚಂದನ ಜಪ್ತಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಈ ವಿಷಯ ತಿಳಿಸಿದ್ದಾರೆ. ಪ್ರಕರಣದಲ್ಲಿ ಸದ್ಯ ಓರ್ವನನ್ನ ಮಾತ್ರ ಬಂಧಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದಾರೆ.
ಪರಾರಿಯಾಗಿರುವ ಆರೋಪಿಗಳ ಅಣತಿಯಂತೆ ವಿನೋದ್ ರಕ್ತ ಚಂದನ ತುಂಡುಗಳ ಮಾರಾಟಕ್ಕೆ ಮುಂದಾಗಿದ್ದ. ಎಷ್ಟು ತಿಂಗಳಿಂದ ಈ ವ್ಯವಹಾರ ನಡೆಸುತ್ತಿದ್ದರು ಎನ್ನುವುದು ಎಸ್ಕೇಪ್ ಆಗಿರುವ ಆರೋಪಿಗಳನ್ನ ಬಂಧಿಸಿದ ನಂತರ ಸ್ಪಷ್ಟವಾಗಲಿದೆ. ಅಲ್ಲದೆ ಫಾರ್ಮ್ ಹೌಸ್ ನ ಮಾಲೀಕರು ಯಾರೂ ಎನ್ನುವುದು ಕೂಡಾ ಇಲ್ಲಿವರೆಗೆ ತಿಳಿದು ಬಂದಿಲ್ಲ. ಫಾರ್ಮ್ ಹೌಸ್ ಮಾಲೀಕನ ಮಾಹಿತಿಗಾಗಿ ಗ್ರಾಮ ಲೆಕ್ಕಾಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : HD Kumaraswamy : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡಲ್ಲ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.