Rishi Sunak Wife: ಬ್ರಿಟನ್ ರಾಣಿಗಿಂತ ಶ್ರೀಮಂತೆ ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ!

Rishi Sunak Wife Net Worth: ರಿಷಿ ಸುನಕ್ ಈಗ ಚುನಾವಣಾ ಪ್ರಚಾರದಲ್ಲಿ ಅವರ ಪತ್ನಿ ಅಕ್ಷತಾ ಮೂರ್ತಿಯ ಬೆಂಬಲವನ್ನು ಪಡೆದಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಿಷಿ ಸುನಕ್ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾಣಿಸಿಕೊಂಡರು.

Written by - Chetana Devarmani | Last Updated : Jul 26, 2022, 02:39 PM IST
  • ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಬಿರುಸಿನ ಪ್ರಚಾರ
  • ಪತಿ ರಿಷಿ ಅವರಿಗೆ ಪತ್ನಿ ಅಕ್ಷತಾ ಮೂರ್ತಿಯ ಬೆಂಬಲ
  • ಬ್ರಿಟನ್ ರಾಣಿಗಿಂತ ಶ್ರೀಮಂತೆ ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ
Rishi Sunak Wife: ಬ್ರಿಟನ್ ರಾಣಿಗಿಂತ ಶ್ರೀಮಂತೆ ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ!  title=
ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ

Rishi Sunak wife Akshata Murthy: ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಕ್ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಏತನ್ಮಧ್ಯೆ, ರಿಷಿ ಸುನಕ್ ಅವರ ಕುಟುಂಬದ ಬೆಂಬಲವೂ ಸಿಕ್ಕಿದೆ. ಭಾನುವಾರ, ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ತಮ್ಮ ಪತಿಗಾಗಿ ಪ್ರಚಾರ ಮಾಡಿದರು. ಈ ಸಮಯದಲ್ಲಿ, ರಿಷಿ ಸುನಕ್ ಅವರ ಮಕ್ಕಳು ಸಹ ಅವರೊಂದಿಗೆ ಕಾಣಿಸಿಕೊಂಡರು. ಚುನಾವಣಾ ಪ್ರಚಾರದಲ್ಲಿ ತಮ್ಮ ಕುಟುಂಬದ ಬೆಂಬಲವನ್ನು ಪಡೆದಾಗ ಬ್ರಿಟನ್‌ನಲ್ಲಿ ಪ್ರಧಾನಿ ಅಭ್ಯರ್ಥಿ ತುಂಬಾ ಸಂತೋಷದಿಂದ ಕಾಣುತ್ತಿದ್ದರು. ಅವರು ತಮ್ಮ ಕುಟುಂಬದೊಂದಿಗೆ ತೆಗೆದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಚಂದ್ರನ ಮೇಲ್ಮೈ ಭಾಗದಲ್ಲಿ ಇನ್ನೂ ಇದೆ ನೀಲ್ ಆರ್ಮ್‌ಸ್ಟ್ರಾಂಗ್ ಹೆಜ್ಜೆ ಗುರುತು..!

ರಿಷಿ ಸುನಕ್ ಕುಟುಂಬದೊಂದಿಗೆ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ರಿಷಿ ಸುನಕ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಕುಟುಂಬದೊಂದಿಗೆ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.  

ರಿಷಿ ಸುನಕ್ ಅವರು ಹಂಚಿಕೊಂಡ ಚಿತ್ರಗಳಲ್ಲಿ ಅವರು, ಅವರ ಪತ್ನಿ ಅಕ್ಷತಾ ಮೂರ್ತಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಕಾಣಿಸಿಕೊಂಡಿದ್ದಾರೆ. ಎಲ್ಲರ ಮುಖದಲ್ಲೂ ಸಂತಸ ಎದ್ದು ಕಾಣುತ್ತಿದೆ. ಮತ್ತೊಂದು ಫೋಟೋದಲ್ಲಿ, ಕುಟುಂಬದ ನಾಲ್ವರು ಸಹ ಪರಸ್ಪರ ಮಾತನಾಡುತ್ತಿರುವುದನ್ನು ಕಾಣಬಹುದು. ಫೋಟೋದಲ್ಲಿ, ರಿಷಿ ಸುನಕ್ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಮಗಳ ಕೈಯನ್ನು ಹಿಡಿದಿದ್ದಾರೆ.

ಇದನ್ನೂ ಓದಿ: Viral Video: 10 ಸೆಕೆಂಡ್‌ಗಿಂತ ಕಡಿಮೆ ಅವಧಿಯಲ್ಲಿ ಟೈ ಕಟ್ಟುವ ಎಪಿಕ್ ಹ್ಯಾಕ್ ಇಲ್ಲಿದೆ

ಅಕ್ಷತಾ ಮೂರ್ತಿ ಬ್ರಿಟನ್ ರಾಣಿಗಿಂತ ಶ್ರೀಮಂತೆ:

ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಭಾರತದ ಅತಿದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಗಳು. ಅಕ್ಷತಾ ಮೂರ್ತಿ ಬ್ರಿಟನ್‌ನ ಶ್ರೀಮಂತ ಮಹಿಳೆಯರಲ್ಲಿ ಒಬ್ಬರು. ಬ್ರಿಟನ್ ರಾಣಿ ಎಲಿಜಬೆತ್ ಗಿಂತ ಅಕ್ಷತಾ ಮೂರ್ತಿ ಅವರ ಸಂಪತ್ತು ಹೆಚ್ಚು ಎನ್ನಲಾಗಿದೆ. ಸಂಡೇ ಟೈಮ್ಸ್ ನಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ, ರಾಣಿ ಎಲಿಜಬೆತ್ ಅವರ ಆಸ್ತಿ 3500 ಕೋಟಿ, ಅಕ್ಷತಾ ಮೂರ್ತಿ ಆಸ್ತಿ ಸುಮಾರು 4300 ಕೋಟಿಯಂತೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News