ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಶಾಂತಿ ನಿರ್ಮಾಣವಾಗಿದ್ದು, ಸರಣಿ ಹತ್ಯೆಗಳು ನಡೆದಿದ್ದವು. ಘಟನೆಯಿಂದ ಭಯಭೀತರಾದ ಜನರು ಮನೆಯಿಂದ ಹೊರಬರಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಪೊಲೀಸರು ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ನಿಷೇಧಾಜ್ಞೆಯೂ ಜಾರಿಗೊಳಿಸಿದ್ದಾರೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಎರಡನೇ ಟಿ20 ಪಂದ್ಯ ಗೆಲ್ಲಲು ಟೀಂ ಇಂಡಿಯಾದ Playing 11 ಭಾರಿ ಬದಲಾವಣೆ!
ಮಸೂದ್, ಪ್ರವೀಣ್ ನೆಟ್ಟಾರು ಮತ್ತು ಫಾಝಿಲ್ ಹತ್ಯೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಕಾಮೆಂಟ್‌ಗಳನ್ನು ಕೆಲ ಕಿಡಿಗೇಡಿಗಳು ಮಾಡುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ (ಸೈಬರ್ ಅಪರಾಧಗಳ ತನಿಖಾ ಠಾಣೆ) ಪೊಲೀಸರು ಸದ್ಯ ಐದು ಕೇಸ್‌ಗಳನ್ನು ದಾಖಲಿಸಿಕೊಂಡಿದ್ದಾರೆ.
"ಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳ ಮಾಹಿತಿ ನೀಡಿದೆ" ಎಂಬ ಸುಳ್ಳು ಸಂದೇಶ ಎಲ್ಲೆಡೆ ಹರಿದಾಡುತ್ತಿತ್ತು. ಇವೆಲ್ಲವೂ ಸದ್ಯ ಕರಾವಳಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಪ್ರತಿಕಾರ ತೀರಿಸಿಕೊಳ್ಳುವ ವಿಚಾರವಾಗಿ ಹರಿದಾಡಿದ ಪೋಸ್ಟ್ ಎಂದು ಹೇಳಲಾಗುತ್ತಿದೆ.
ಮಂಗಳೂರಿನಲ್ಲಿ ನಡೆದ ಒಂದು ಕೊಲೆಗೆ ಪ್ರತೀಕಾರವಾಗಿ 10 ಕೊಲೆ ಮಾಡುವುದಾಗಿ ಪೋಸ್ಟ್ ಹಾಕಲಾಗಿತ್ತು. ಇವೆಲ್ಲವೂ ನಿರ್ದಿಷ್ಟ ಜಾತಿ ಮತ್ತು ಸಮುದಾಯವನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಕರೆ ನೀಡುವ ಸಂದೇಶವಾಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಫೇಸ್‌ಬುಕ್ ಪೋಸ್ಟ್, ವಾಟ್ಸಪ್ ಗ್ರೂಪ್ ಚರ್ಚೆ, ಕಾಮೆಂಟ್ಸ್ , ಆನ್ ದಿ ನ್ಯೂಸ್ ಕಾಲಂ, ಪ್ರಿಂಟ್-ಇಲೆಕ್ಟ್ರಾನಿಕ್ಸ್, ಯೂಟ್ಯೂಬ್, ಡಿಜಿಟಲ್‌ಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು
ಸದ್ಯ ದಾಖಲಾದ ಐದು ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಮಂಗಳೂರು ಸೈಬರ್ ಅಪರಾಧಗಳ ತನಿಖಾ ಠಾಣೆ ಪೊಲೀಸರು ನಿರ್ಧರಿಸಿದ್ದಾರೆ. ಇನ್ನೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿಯಬಿಡುತ್ತಿದ್ದು, ಅವುಗಳ ಮೇಲೂ ನಿಗಾ ಇಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.