ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಐಎಂಡಿ ನೀಡಿರುವ ಎಚ್ಚರಿಕೆಯ ಪ್ರಕಾರ, ಗುಜರಾತ್, ಮಹಾರಾಷ್ಟ್ರ, ಒಡಿಶಾ, ಛತ್ತೀಸ್ಗಢ, ಗುಜರಾತ್, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇದರೊಂದಿಗೆ ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಎರಡು ಮೂರು ದಿನಗಳ ಕಾಲ ಒಡಿಶಾ, ಛತ್ತೀಸ್ಗಢ, ವಿದರ್ಭ, ಗುಜರಾತ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದೇ ಸಮಯದಲ್ಲಿ, ದೆಹಲಿಯಲ್ಲಿ ಮೋಡ ಕವಿದ ವಾತಾವರಣವಿರುತ್ತದೆ ಆದರೆ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಈ ರಾಜ್ಯಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ:
ಸ್ಕೈಮೆಟ್ ಹವಾಮಾನ ಮುನ್ಸೂಚನೆ ಪ್ರಕಾರ, ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಗುಜರಾತ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣದಿಂದ ಭಾರೀ ಮಳೆಯಾಗಬಹುದು. ಪಶ್ಚಿಮ ಬಂಗಾಳ, ದಕ್ಷಿಣ ಜಾರ್ಖಂಡ್, ತೆಲಂಗಾಣ, ಮರಾಠವಾಡ ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿಯೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ- ಕ್ರಿಕೆಟ್ ಪಿಚ್ ನಲ್ಲಿ 'ಬೌಲ್ಡ್', ರಾಜಕೀಯದಲ್ಲಿ 'ಕಿಂಗ್ ಮೇಕರ್': ತೇಜಸ್ವಿ ಜೀವನವೇ ವಿಭಿನ್ನ
ಈ ರಾಜ್ಯಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ :
ಈಶಾನ್ಯ ಭಾರತ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ತೆಲಂಗಾಣದ ಉಳಿದ ಭಾಗಗಳು, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಬಹುದು.
ಅದೇ ಸಮಯದಲ್ಲಿ, ಜಾರ್ಖಂಡ್, ತಮಿಳುನಾಡು, ಕರ್ನಾಟಕದ ಒಳಭಾಗ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಲಡಾಖ್ನ ಉಳಿದ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಬಿಹಾರದ ಉಳಿದ ಭಾಗಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಇದಲ್ಲದೇ ಬಿಹಾರ ಮತ್ತು ಜಾರ್ಖಂಡ್ ನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಾರ್ಖಂಡ್ ರಾಜಧಾನಿ ರಾಂಚಿ ಸೇರಿದಂತೆ ಲತೇಹಾರ್, ಲೋಹರ್ದಗಾ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ- New Government In Bihar: ನಾಳೆ ಬಿಹಾರದಲ್ಲಿ ಮಹಾಮೈತ್ರಿಕೂಟದ ಹೊಸ ಸರ್ಕಾರ ರಚನೆ, ಮಧ್ಯಾಹ್ನ 2 ಗಂಟೆಗೆ ಪ್ರಮಾಣವಚನ ಸಮಾರಂಭ!
ರಾಜಸ್ಥಾನದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ:
ರಾಜಸ್ಥಾನದ ಜೈಪುರದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜಸ್ಥಾನದ ಸುಮಾರು 18 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಈ ಅವಧಿಯಲ್ಲಿ 1-2 ಸ್ಥಳಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.