Happy Independence Day 2022: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿ ಭಾರತ

75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಧಾನಿ ಮೋದಿ ಇಂದು ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Written by - Zee Kannada News Desk | Last Updated : Aug 15, 2022, 06:32 AM IST
  • ಭಾರತ ದೇಶವು 75ನೇ ವರ್ಷದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿದೆ
  • ಪ್ರಧಾನಿ ಮೋದಿ ಇಂದು ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
  • ಪ್ರಧಾನಿ ಮೋದಿ ಇಂದಿನ ತಮ್ಮ ಭಾಷಣದಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ
Happy Independence Day 2022: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿ ಭಾರತ title=
‘ಸ್ವಾತಂತ್ರ್ಯದ ಅಮೃತ ಮಹೋತ್ಸವ'

ನವದೆಹಲಿ: ಭಾರತ ದೇಶವು 75ನೇ ವರ್ಷದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ನೀಡಿದ ‘ಹರ್ ಘರ್ ತಿರಂಗಾ’ ಅಭಿಯಾನದ ಕರೆಯಿಂದಾಗಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಹಳ್ಳಯಿಂದ ದಿಲ್ಲಿವರೆಗೂ ಮನೆಗಳ ಮೇಲೆ ನಮ್ಮ ಹೆಮ್ಮೆಯ ರಾಷ್ಟ್ರಧ್ವಜ ಹಾರಾಡುತ್ತಿದೆ.

75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಧಾನಿ ಮೋದಿ ಇಂದು ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಗಿಭದ್ರತೆ ಹಿನ್ನೆಲೆ ಸುಮಾರು 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕೆಂಪುಕೋಟೆಯ ದ್ವಾರದಲ್ಲಿ ಎಫ್‌ಆರ್‌ಎಸ್‌ ಇರುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಹಲವು ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ. ಕೆಂಪುಕೋಟೆ ಸುತ್ತಲಿನ 5 ಕಿ.ಮೀ ಪ್ರದೇಶವನ್ನು ಗಾಳಿಪಟ ನಿಷೇಧಿತ ವಲಯವೆಂದು ಘೋಷಿಸಲಾಗಿದೆ.

ಇದನ್ನೂ ಓದಿ: Mohan Bhagwat: 'ಭಯಪಡುವುದನ್ನು ಬಿಟ್ಟರೆ ಭಾರತ ಅಖಂಡವಾಗಲಿದೆ'

ಕೆಂಪುಕೋಟೆಯಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ 7 ಸಾವಿರಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸುವ ನಿರೀಕ್ಷೆ ಇದೆ. ವಾಣಿಜ್ಯ ನಗರಿ ಮುಂಬೈ, ರಾಜ್ಯ ರಾಜಧಾನಿ ಬೆಂಗಳೂರು ಸೇರಿ ದೇಶದ ಎಲ್ಲ ಮಹಾನಗರಗಳಲ್ಲಿಯೂ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪೊಲೀಸರನ್ನು ನಿಯೋಜಿಸುವುದರ ಜೊತೆಗೆ ಡ್ರೋನ್‌ ತಡೆ ವ್ಯವಸ್ಥೆ ಅಳವಡಿಸಲಾಗಿದೆ. ಸ್ವಾತಂತ್ರ್ಯ ದಿನವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯ ಎಸಗುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ.  

ಪ್ರಧಾನಿ ಮೋದಿ ಇಂದಿನ ತಮ್ಮ ಭಾಷಣದಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ. ಸತತ 9ನೇ ವರ್ಷ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣ ಮಾಡಲಿದ್ದಾರೆ. ಹಿಂದಿನ ವರ್ಷಗಳ ಭಾಷಣಗಳಲ್ಲಿ ಅವರು ಮಹತ್ವದ ಯೋಜನೆಗಳನ್ನು ಘೋಷಿಸಿದ್ದರು. ಅದರಂತೆ ಇಂದು ಸಹ ಅವರು ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. 76ನೇ ಸ್ವಾತಂತ್ರ್ಯೋತ್ಸವದ ಮುಖ್ಯ ಕಾರ್ಯಕ್ರಮ ನಡೆಯಲಿರುವ ದೆಹಲಿಯಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ರಾಜ್ಯದ 18 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News