ನವದೆಹಲಿ: 75ನೇ ವರ್ಷದ ‘ಸ್ವಾತಂತ್ರ್ಯ ಅಮೃತಮಹೋತ್ಸವ’ವನ್ನು ಅದ್ದೂರಿಯಾಗಿ ಆಚರಿಸಲು ಇಡೀ ದೇಶವೇ ಸಜ್ಜಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15ರ ಬೆಳಗ್ಗೆ 7.30ಕ್ಕೆ ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯಾಗಿ 9ನೇ ಬಾರಿಗೆ ಅವರು ಧ್ವಜಾರೋಹಣ ಮಾಡಲಿದ್ದಾರೆ.
ಆಗಸ್ಟ್ 15ರ ಪ್ರಧಾನಿ ಮೋದಿ ಕಾರ್ಯಕ್ರಮಗಳು
ಪ್ರಧಾನಿ ಮೋದಿಯವರು ಬೆಳಗ್ಗೆ 7 ಗಂಟೆ 6 ನಿಮಿಷಕ್ಕೆ ರಾಜ್ ಘಾಟ್ ತಲುಪಲಿದ್ದಾರೆ. ಗಾಂಧಿ ಸಮಾಧಿಗೆ ನಮಿಸಿ ಅಲ್ಲಿಂದ ಕೆಂಪುಕೋಟೆಗೆ ತಲುಪಲಿದ್ದಾರೆ. ಸೇನಾಪಡೆಗಳಿಂದ ಗಾರ್ಡ್ ಆಫ್ ಹಾನರ್ ಪಡೆದು 7.30ಕ್ಕೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. 7.33ರಿಂದ ಪ್ರಧಾನಿ ಮೋದಿ ಭಾಷಣ ಆರಂಭಿಸಲಿದ್ದಾರೆ.
ಇದನ್ನೂ ಓದಿ: Happy Independence Day 2022: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿ ಭಾರತ
ಕಾರ್ಯಕ್ರಮದಲ್ಲಿ ಸುಮಾರು 7 ಸಾವಿರ ಜನ ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ. ಕೇಂದ್ರಿಯ ಮೀಸಲು ಪಡೆ ಸೇರಿ 10 ಸಾವಿರ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. FRS ತಂತ್ರಜ್ಞಾನ ಆಧಾರಿತ ಸಿಸಿಟಿವಿ ಅಳವಡಿಸಲಾಗಿದೆ. ಮೇಲುಸ್ತುವಾರಿಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಅನುಮಾನಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಕೆಂಪುಕೋಟೆ ಸೇರಿದಂತೆ ದಹೆಲಿಯ ಪ್ರಮುಖ ಸ್ಥಳಗಳಲ್ಲಿ ಡ್ರೋನ್, ಗಾಳಿಪಟ ಹಾರಾಟ ನಿಷೇಧಿಸಲಾಗಿದೆ. ಸ್ವಾತಂತ್ರ್ಯೋತ್ಸವವನ್ನೇ ಗುರಿಯಾಗಿಸಿಕೊಂಡು ವಿದ್ವಂಸಕ ಕೃತ್ಯ ಎಸಗುವವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಪ್ರಧಾನಿ ಮೋದಿಯವರ ಸ್ವಾತಂತ್ರ್ಯೋತ್ಸವದ ಭಾಷಣವನ್ನು ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೋ ನೇರಪ್ರಸಾರ ಮಾಡಲಿದೆ.
ಇದನ್ನೂ ಓದಿ: ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ 9ನೇ ಬಾರಿಗೆ ಪಿಎಂ ಮೋದಿ ಭಾಷಣ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.