Independence Day 2022: 'ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅನೇಕ ಸವಾಲು ಎದುರಿಸಿದೆ'

ರಾಷ್ಟ್ರಧ್ವಜಾರೋಹಣಕ್ಕೂ ಮೊದಲು ಪ್ರಧಾನಿ ಮೋದಿ ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ನಮನ ಸಲ್ಲಿಸಿದರು.

Written by - Zee Kannada News Desk | Last Updated : Aug 15, 2022, 08:13 AM IST
  • ಐತಿಹಾಸಿಕ ದೆಹಲಿ ಕೆಂಪುಟಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು
  • ರಾಷ್ಟ್ರಧ್ವಜಾರೋಹಣಕ್ಕೂ ಮೊದಲು ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ನಮನ
  • ಪ್ರಧಾನಿ ಮೋದಿಗೆ ವಾಯುಪಡೆ, ನೌಕಾಪಡೆ ಮತ್ತು ಭೂಸೇನೆಯ ತುಕಡಿಗಳು ಶಿಷ್ಟಾಚಾರದಂತೆ ಗೌರವ ವಂದನೆ
Independence Day 2022: 'ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅನೇಕ ಸವಾಲು ಎದುರಿಸಿದೆ'   title=
ಕೆಂಪುಟಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

 ನವದೆಹಲಿ: ದೇಶದ 75ನೇ ವರ್ಷದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸಂಭ್ರಮದ ಪ್ರಯುಕ್ತ ದೆಹಲಿ ಕೆಂಪುಟಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಧ್ವಜಾರೋಹಣಕ್ಕೂ ಮೊದಲು ಪ್ರಧಾನಿ ಮೋದಿ ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ತಲುಪಿದ ಅವರಿಗೆ ವಾಯುಪಡೆ, ನೌಕಾಪಡೆ ಮತ್ತು ಭೂಸೇನೆಯ ತುಕಡಿಗಳು ಶಿಷ್ಟಾಚಾರದಂತೆ ಗೌರವ ವಂದನೆ ಸಲ್ಲಿಸಿದವು.  ಬಳಿಕ ಪ್ರಧಾನಿ ಮೋದಿ ಐತಿಹಾಸಿಕ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಬಳಿಕ ಸ್ವಾತಂತ್ರ್ಯೋತ್ಸವದ ಭಾಷಣ ಆರಂಭಸಿದ ಪ್ರಧಾನಿ ಮೋದಿ, ‘ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನ’ವೆಂದು ಹೇಳಿದರು.

ಇದನ್ನೂ ಓದಿ: Happy Independence Day 2022: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿ ಭಾರತ

ಇದೇ ವೇಳೆ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಪ್ರಧಾನಿ ಮೋದಿ ನೆನೆದರು. ‘ಕರ್ತವ್ಯದ ಹಾದಿಯಲ್ಲಿ ಜೀವ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಅವರಿಗೆ ನಾಗರಿಕರು ಕೃತಜ್ಞತೆ ಸಲ್ಲಿಸಿದ್ದಾರೆ. ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಬ್ರಿಟಿಷರ ಆಳ್ವಿಕೆಯ ಬುನಾದಿ ಬುಡಮೇಲು ಮಾಡಿದ ನಮ್ಮ ಅಸಂಖ್ಯಾತ ಕ್ರಾಂತಿಕಾರಿಗಳಿಗೆ ಈ ದೇಶ ಕೃತಜ್ಞತೆ ಸಲ್ಲಿಸುತ್ತದೆ’ ಎಂದು ಹೇಳಿದರು.

‘ಆಜಾದಿ ಕಾ ಅಮೃತ ಮಹೋತ್ಸವ’ದ ಸಂದರ್ಭದಲ್ಲಿ ನಾವು ನಮ್ಮ ಅನೇಕ ರಾಷ್ಟ್ರನಾಯಕರನ್ನು ಸ್ಮರಿಸಿದ್ದೇವೆ. ಆಗಸ್ಟ್ 14ರಂದು ನಾವು ವಿಭಜನೆಯ ಭೀಕರತೆಯನ್ನು ನೆನಪಿಸಿಕೊಂಡಿದ್ದೇವೆ. ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುನ್ನಡೆಸಲು ಕೊಡುಗೆ ನೀಡಿದ ದೇಶದ ಎಲ್ಲಾ ನಾಗರಿಕರನ್ನು ಇಂದು ನೆನಪಿಸಿಕೊಳ್ಳುವ ದಿನವಾಗಿದೆ. ರಾಣಿ ಲಕ್ಷ್ಮೀಬಾಯಿ, ಝಲ್ಕರಿ ಬಾಯಿ, ಚೆನ್ನಮ್ಮ, ಬೇಗಂ ಹಜರತ್ ಮಹಲ್ ಆಗಿರಲಿ, ಭಾರತದ ಮಹಿಳೆಯರ ಶಕ್ತಿಯನ್ನು ನೆನಪಿಸಿಕೊಂಡಾಗ ಪ್ರತಿ ಭಾರತವೂ ಹೆಮ್ಮೆಯಿಂದ ತುಂಬುತ್ತದೆ’ ಎಂದು ಮೋದಿ ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ಸ್ಮರಿಸಿದರು.

ಇದನ್ನೂ ಓದಿ: Independence Day 2022: ಪ್ರಧಾನಿ ಮೋದಿಯವರ ಇಂದಿನ ಕಾರ್ಯಕ್ರಮಗಳ ವಿವರ ಇಲ್ಲಿದೆ ನೋಡಿ

‘ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಾಗಲಿ ಅಥವಾ ರಾಷ್ಟ್ರವನ್ನು ಕಟ್ಟುವವರಾಗಲಿ ಎಲ್ಲರನ್ನೂ ನಾವು ಸ್ಮರಿಸಬೇಕು. ಡಾ.ರಾಜೇಂದ್ರ ಪ್ರಸಾದ್, ಪಂಡಿತ್ ಜವಾಹರ್ ಲಾಲ್ ನೆಹರೂ , ಸರ್ದಾರ್ ಪಟೇಲ್, ಎಸ್ಪಿ ಮುಖರ್ಜಿ, ಎಲ್.ಬಿ,ಶಾಸ್ತ್ರಿ, ದೀನದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ್, ಆರ್ ಎಂ ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ ದೇಶಕ್ಕೆ ಇವರೆಲ್ಲರ ಕೊಡುಗೆ ಅನನ್ಯ. ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತವು ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದೆ ಮತ್ತು ಅನೇಕ ಸವಾಲುಗಳನ್ನು ಎದುರಿಸಿದೆ ಎಂದು ಸಾಬೀತುಪಡಿಸಿದೆ’ ಅಂತಾ ಪ್ರಧಾನಿ ಮೋದಿ ಹೇಳಿದರು.

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

  

Trending News