ಸಾಕ್ಷ್ಯಾಧಾರ ಇದ್ದರೆ PFI, SDPI ಸಂಘಟನೆಗಳನ್ನು ನಿಷೇಧಿಸಲಿ: ಸಿದ್ದರಾಮಯ್ಯ

ಗಲಭೆಗಳಿಗೆ ಸೂಕ್ತ ಸಾಕ್ಷ್ಯಾಧಾರ ಇದ್ದರೆ ಬಿಜೆಪಿ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Aug 16, 2022, 01:16 PM IST
  • PFI, SDPI ಸಮಾಜದ ಸಾಮರಸ್ಯ ಹಾಳುಮಾಡುತ್ತಿವೆ & ಗಲಭೆಗಳಿಗೆ ಕಾರಣವಾಗುತ್ತಿವೆ ಎಂಬ ಆರೋಪ
  • ಸೂಕ್ತ ಸಾಕ್ಷ್ಯಾಧಾರ ಇದ್ದರೆ ಬಿಜೆಪಿ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧ ಮಾಡಲಿ
  • ರಾಜ್ಯ & ಕೇಂದ್ರದಲ್ಲಿ ನಿಮ್ಮದೆ ಸರ್ಕಾರ ಇದೆ. ಆದರೂ ಯಾಕೆ ಸುಮ್ಮನಿದ್ದೀರ? ಎಂದು ಸಿದ್ದರಾಮಯ್ಯ ಪ್ರಶ್ನೆ
ಸಾಕ್ಷ್ಯಾಧಾರ ಇದ್ದರೆ PFI, SDPI ಸಂಘಟನೆಗಳನ್ನು ನಿಷೇಧಿಸಲಿ: ಸಿದ್ದರಾಮಯ್ಯ  title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಸಾಕ್ಷ್ಯಾಧಾರ ಇದ್ದರೆ PFI, SDPI ಸಂಘಟನೆಗಳನ್ನು ನಿಷೇಧಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಅವರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳೇ ಇವೆ. ಸಮಾಜದ ಸಾಮರಸ್ಯ ಕದಡುವ ಯಾವುದೇ ರೀತಿಯ ಸಂಘಟನೆಗಳನ್ನು ನಿಷೇಧಿಸಲಿ ಎಂದು ಹೇಳಿದ್ದಾರೆ.

‘ಪಿಎಫ್‍ಐ, ಎಸ್‍ಡಿಪಿಐ ಈ ಯಾವ ಸಂಘಟನೆಗಳೇ ಆಗಲಿ ಸಮಾಜದ ಸಾಮರಸ್ಯ ಹಾಳುಮಾಡುತ್ತಿವೆ, ಗಲಭೆಗಳಿಗೆ ಕಾರಣವಾಗುತ್ತಿವೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇದ್ದರೆ ಬಿಜೆಪಿ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧ ಮಾಡಲಿ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೆ ಸರ್ಕಾರ ಇದೆ. ಆದರೂ ಯಾಕೆ ಸುಮ್ಮನಿದ್ದೀರ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಗ್ಗಿಲ್ಲದೆ ಸಾಗಿದೆ ಗಾಂಜಾ ಜಾಕಲೇಟ್ ಮಾರಾಟ : ಪಾನ್ ಬೀಡಾ ಅಂಗಡಿಯಲ್ಲಿ 46 ಕೆ .ಜಿ ಗಾಂಜಾ ಜಾಕಲೇಟ್ ಪತ್ತೆ

‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ. ಮಸೂದ್ ಮತ್ತು ಫಾಜಿಲ್ ಕುಟುಂಬವನ್ನು ಭೇಟಿಯೂ ಮಾಡಿಲ್ಲ, ಪರಿಹಾರವನ್ನೂ ಘೋಷಿಸಿಲ್ಲ. ಸರ್ಕಾರದ ಬೊಕ್ಕಸದಿಂದ ನೀಡುವ ಪರಿಹಾರದಲ್ಲಿ ಇಂತಹ ತಾರತಮ್ಯ ಯಾಕೆ?’ ಎಂದು ಕಿಡಿಕಾರಿದ್ದಾರೆ.

‘ರಾಷ್ಟ್ರಧ್ವಜದ ಜಾಗದಲ್ಲಿ ಭಗವಾಧ್ವಜ ಹಾರಿಸುತ್ತೇವೆ ಎಂದು ಹೇಳಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಇನ್ನೂ ಪಕ್ಷದಲ್ಲಿಟ್ಟುಕೊಂಡು ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ದುಷ್ಟ ಶಕ್ತಿಗಳ ಮಟ್ಟ ಹಾಕಲಾಗಿದೆ ಎಂದ ಬಿಜೆಪಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News