ಬೆಂಗಳೂರು: ಹಲವು ಬೇಡಿಕೆಗಳನ್ನು ಮುಂದಿಟ್ಟು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಫ್ರೀಡಂ ಪಾರ್ಕ್ನಲ್ಲಿ ನಿನ್ನೆ ಬೆಳಿಗ್ಗೆಯಿಂದ ಘೋಷಣೆ ಕೂಗುತ್ತ ಬಿಸಿಯೂಟ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ನಿನ್ನೆಯಿಂದ ಹೋರಾಟ ನಡೆಸುತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಸಚಿವರಾಗಲಿ ಅಥವಾ ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ.
ಇದನ್ನೂ ಓದಿ- ಬಿಜೆಪಿ ರಾಷ್ಟ್ರಕ್ಕೆ ತಗುಲಿದ ವ್ಯಾದಿಗಳೇ ಹೊರತು ರಾಷ್ಟ್ರವಾದಿಗಳಲ್ಲ: ಕಾಂಗ್ರೆಸ್
ಸಚಿವರು ಮತ್ತು ಅಧಿಕಾರಿಗಳ ಇಂತಹ ನಡೆ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಸಿಯೂಟ ಕಾರ್ಯಕರ್ತೆಯರು, ನಾವು ನಿನ್ನೆ ಬೆಳಿಗ್ಗೆಯಿಂದಲೂ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ, ಸಂಬಂಧಪಟ್ಟ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳಿಗೆ ನಮ್ಮ ಕಷ್ಟ ಕಾಣುತ್ತಿಲ್ಲ, ಅವರು ಆರಾಮವಾಗಿ ಇದ್ದಾರೆ ಎಂದು ಆಕ್ರೋಶದ ನುಡಿಗಳನ್ನಾಡಿದ್ದಾರೆ.
ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮ್ಮ ಪ್ರತಿಭಟನೆ ಮುಂದುವರೆಸಿರುವ ಬಿಸಿಯೂಟ ಕಾರ್ಯಕರ್ತೆಯರು, ಮಧ್ಯಾಹ್ನ ಒಂದು ಗಂಟೆಗೆ ಒಳಗಡೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ- ಬೂಟು ಹಾಕಿಕೊಳ್ಳಲು ಗಾಂಧೀಜಿ ಫೋಟೋ ಆಸರೆಯೇ?: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ
ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆಗಳೇನು..?
• 60 ವರ್ಷ ಮೇಲ್ಪಟ್ಟ ನೌಕರರನ್ನು ಕೆಲಸದಿಂದ ವಜಾಗೊಳಿಸುವಾಗ 1 ಲಕ್ಷ ನಿವೃತ್ತಿ ವೇತನ ಕೊಡಬೇಕು
• ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು, ಇವರನ್ನು ಸರ್ಕಾರಿ ಕಾರ್ಮಿಕರೆಂದು ಗುರುತಿಸಬೇಕು
• ಬಜೆಟ್ ನಲ್ಲಿ ಘೋಷಣೆ ಮಾಡಿದ್ದ 1 ಸಾವಿರ ರೂ. ಗಳನ್ನು ಜಾರಿ ಮಾಡಬೇಕು.
• ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಟ್ಟಿಕೊಡಬೇಕು.
• ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ನೀಡಬೇಕು
• ಬಿಸಿಯೂಟ ನೌಕರರ ವೇತನವನ್ನು 5 ಸಾವಿರಕ್ಕೆ ಹೆಚ್ಚಳ ಮಾಡಬೇಕು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.