ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್, ಬಶೀರ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

Written by - Bhavishya Shetty | Last Updated : Aug 17, 2022, 01:01 PM IST
    • ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
    • ಮೂವರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ
    • ಕಳೆದ ದಿನ ಎನ್ ಐ ಎ ಕೇಸ್ ಸಂಬಂಧ ಮಹತ್ತರ ಮಾಹಿತಿ ನೀಡಿತ್ತು
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ title=
Praveen Nettaru

ದಕ್ಷಿಣ ಕನ್ನಡ ‌ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್, ಬಶೀರ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

ಇದನ್ನೂ ಓದಿ: ಕ್ರಿಸ್ಟಿಯಾನೋ ರೊನಾಲ್ಡೊ ಅವರ ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತಾರಂತೆ ಎಲೋನ್ ಮಸ್ಕ್

ಆಗಸ್ಟ್ 11ರಂದು ಬಂಧಿಸಲಾದ ಇವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿತ್ತು.

ಪೊಲೀಸರು ಆರೋಪಿಗಳನ್ನು ಕಸ್ಟಡಿಗೆ ಪಡೆದು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇನ್ನು ಕಳೆದ ದಿನವಷ್ಟೇ ಎನ್ ಐ ಎ ಮಹತ್ತರ ಮಾಹಿತಿಯನ್ನು ಹೊರಹಾಕಿದೆ. ಪ್ರವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ ಉಲ್ಲೇಖಿಸಿದ ಎನ್ ಐಎ, ಕೊಲೆ ಹಿಂದಿನ ಇನ್ ಸೈಡ್ ಸಿಕ್ರೇಟ್ ರಿವೀಲ್ ಮಾಡಿದೆ. ಸ್ಥಳೀಯ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯಕ್ಕೆ ಸಂಚು ರೂಪಿಸಲಾಗಿದೆ ಎಂದು ತನಿಖೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿ: ನಿಗೂಢ ಸಾವು: ಮನೆಯೊಂದರಲ್ಲಿ ಪತ್ತೆಯಾಯ್ತು ಒಂದೇ ಕುಟುಂಬದ ಆರು ಜನರ ಶವಗಳು!

ಸದ್ಯ ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ಝಾಕೀರ್, ಮಹಮ್ಮದ್ ಶಫೀಕ್, ಶೇಕ್ ಸದ್ದಾಂ ಮತ್ತು ಅಬ್ದುಲ್ ಹ್ಯಾರಿಸ್ ಮೇಲೆ ಐಪಿಸಿ 120ಬಿ, 302, 34 ಹಾಗೂ ಯುಎಪಿಎ ಕಲಂ 16 ಮತ್ತು18 ರ ಅಡಿಯಲ್ಲಿ ಎನ್ ಐ ಎ ಅಧಿಕಾರಿಗಳು ಎಫ್ಐಆರ್ ದಾಖಲು ಮಾಡಿದ್ದಾರೆ. ಈ ಕೇಸ್ ಎನ್ಐಎ ದೆಹಲಿ ಠಾಣೆಯಲ್ಲಿ ದಾಖಲಾಗಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News