ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ 22ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಆದೇಶ ಹೊರಡಿಸಿದ್ದಾರೆ.
ಕಳೆದ 18ದಿನಗಳಿಂದ ಚಿರತೆ ಹಿಡಿಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಮತ್ತೆ ಮತ್ತೆ ಜಿಲ್ಲೆಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಲೇ ಇದೆ. ಇದೀಗ ಜಿಲ್ಲೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಶಾಲಾ ಮಕ್ಕಳು, ಪೋಷಕರಲ್ಲಿ ಭಯ ಆವರಿಸಿದೆ. ಆಗಷ್ಟ್ 5ರಂದು ಬೆಳಗಾವಿಯ ಜಾಧವ್ ನಗರದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಕಾರ್ಮಿಕನೊಬ್ಬನ ಮೇಲೆ ದಾಳಿ ನಡೆಸಿತ್ತು. ಇದೀಗ ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಚಿರತೆ ಪತ್ತೆಯಾಗಿದ್ದು, ಬಸ್ ಚಾಲಕ ನೊಬ್ಬ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ : ಹೃದಯಾಘಾತದಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ
ಇದೀಗ ಕೊನೆಗೂ ಬೆಳಗಾವಿಯಲ್ಲಿ ಆಪರೇಷನ್ ಚಿರತೆ ಆರಂಭವಾಗಿದೆ. ನಗರದ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಒಂದು ಎಕರೆ ಪ್ರದೇಶದಲ್ಲಿ ಇರುವ ಮರಳ ಮಧ್ಯೆ ಚಿರತೆ ಇದೆ ಎನ್ನಲಾಗಿದೆ. ಗಾಲ್ಫ್ ಮೈದಾನ ಮತ್ತು ಕ್ಯಾಂಪ್ ಪ್ರದೇಶದ ಮಧ್ಯದಲ್ಲಿ ಚಿರತೆ ಇದೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಮತ್ತು ಪೊಲೀಸ್ ಸಿಬ್ಬಂದಿಯಿಂದ ಕೊಂಬಿಂಗ್ ಆರಂಭವಾಗಿದೆ. ಕೈಯಲ್ಲಿ ಅರವಳಿಕೆ ಗನ್, ಲಾಠಿ, ರೈಫಲ್ ಹಿಡಿದು ಕೊಂಬಿಂಗ್ ಆರಂಭಿಸಲಾಗಿದೆ.
ಚಿರತೆ ಪತ್ತೆಯಾದ ಸಂಪೂರ್ಣ ಪ್ರದೇಶವನ್ನ ಪೊಲೀಸರು ಬ್ಲಾಕ್ ಮಾಡಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ, ಎಸಿಎಫ್ ಮಜುಂನಾಥ ಕುಸನಾಳ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭವಾಗಿದೆ.
ಇದನ್ನೂ ಓದಿ : ಗಣೇಶ ಹಬ್ಬ ಹಿನ್ನೆಲೆ - ನಗರದಾದ್ಯಂತ ಅಲರ್ಟ್.! ಪೊಲೀಸರಿಂದ ಸ್ಪೆಷಲ್ ಡ್ರೈವ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.