'ವಿಕಿಪೀಡಿಯ' ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್: ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್

ಇದೀಗ ಮೋಡಕ್ಕೆ‌ ಮೋಡ ಎಂಬ ಮೆಲೋಡಿ ಗಾನಲಹರಿಯನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೇಳುಗರನ್ನು ಮಂತ್ರ‌ ಮುಗ್ದರನ್ನಾಗಿ ಮಾಡುತ್ತಿದೆ. ಪ್ರಮೋದ್ ಮರವಂತೆ ಅರ್ಥಪೂರ್ಣ ಸಾಹಿತ್ಯಕ್ಕೆ ರಾಕ್ ಆಂಡ್ ನಿಲ್ ಸೊಗಸಾದ ಮ್ಯೂಸಿಕ್ ನೀಡಿದ್ದು, ರಘು ದೀಕ್ಷಿತ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.

Written by - YASHODHA POOJARI | Edited by - Bhavishya Shetty | Last Updated : Aug 23, 2022, 02:59 PM IST
    • ವಿಕಿಪೀಡಿಯ ಸಿನಿಮಾದ ಮೋಡಕ್ಕೆ‌ ಮೋಡನೇ ಹಾಡು ರಿಲೀಸ್
    • ಪ್ರಮೋದ್ ಮರವಂತೆ ಅವರ ಅರ್ಥಪೂರ್ಣ ಸಾಹಿತ್ಯವಿರುವ ಹಾಡು
    • ರಘುದೀಕ್ಷಿತ್ ಕಂಠಕ್ಕೆ ಮರುಳಾದ ಸಿನಿ ಪ್ರಿಯರು
'ವಿಕಿಪೀಡಿಯ' ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್: ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್ title=
Modakke Modane Song

ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿ ಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಹೆಣೆದಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ವಿಕಿಪೀಡಿಯ ಸಿನಿಮಾ 26ಕ್ಕೆ ತೆರೆಗೆ ಬರ್ತಿದ್ದು, ಚಿತ್ರತಂಡ ಒಂದೊಂದೇ ಹಾಡುಗಳನ್ನು ಅನಾವರಣ ಮಾಡ್ತಿದೆ. 

ಇದನ್ನೂ ಓದಿ: ಜೂ. ಎನ್‌ಟಿಆರ್ - ಕೇಂದ್ರ ಸಚಿವ ಅಮಿತ್ ಶಾ ಭೇಟಿ! ಈ ಮೀಟ್ & ಗ್ರೀಟ್ ಹಿಂದಿನ ಉದ್ದೇಶವೇನು?

ಇದೀಗ ಮೋಡಕ್ಕೆ‌ ಮೋಡ ಎಂಬ ಮೆಲೋಡಿ ಗಾನಲಹರಿಯನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೇಳುಗರನ್ನು ಮಂತ್ರ‌ ಮುಗ್ದರನ್ನಾಗಿ ಮಾಡುತ್ತಿದೆ. ಪ್ರಮೋದ್ ಮರವಂತೆ ಅರ್ಥಪೂರ್ಣ ಸಾಹಿತ್ಯಕ್ಕೆ ರಾಕ್ ಆಂಡ್ ನಿಲ್ ಸೊಗಸಾದ ಮ್ಯೂಸಿಕ್ ನೀಡಿದ್ದು, ರಘು ದೀಕ್ಷಿತ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ. 

ಇದನ್ನೂ ಓದಿ: ಹೀರೋ ಆದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್: ಯಥಾ ರಾಜ ತಥಾ ಪ್ರಜಾ ಚಿತ್ರಕ್ಕೆ ಮುಹೂರ್ತ

ಹಲವಾರು ಧಾರಾವಾಹಿಗಳಲ್ಲಿ ಮಿಂಚಿರುವ ಯಶವಂತ್ ಹೀರೋ ಆಗಿ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಆಶಿಕಾ ಸೋಮಶೇಖರ್ ನಟಿಸಿದ್ದಾರೆ. ಡ್ರಾಮಾ, ಎಮೋಷನಲ್, ಲವ್, ಸೆಂಟಿಮೆಂಟ್ ಎಲ್ಲದರ ಮಿಶ್ರಣವಿರುವ ವಿಕಿಪೀಡಿಯ ಚಿತ್ರಕ್ಕೆ ಚಿದಾನಂದ್ ಎಚ್‌.ಕೆ. ಅವರ ಛಾಯಾಗ್ರಹಣ, ರಾಕೇಶ್ ಮತ್ತು ನೀಲಿಮ ಸಂಗೀತ, ರವಿಚಂದ್ರನ್ ಸಿ ಅವರ ಸಂಕಲನವಿದೆ. ರಫ್ ಕಟ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗಿರುವ ಸಿನಿಮಾ ಇದೇ 26ರಂದು ರಾಜ್ಯಾದ್ಯಂತ ತೆರೆಗೆ ಬರ್ತಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News