ತೀಕ್ಷ್ಣ ನೋಟ, ಗಮನ ಸೆಳೆಯುವ ಅಭಿನಯ, ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುವ ಕಂಚಿನ ಕಂಠದ ಗಾಯಕ ಕಂ ನಾಯಕ ವಸಿಷ್ಠ ಸಿಂಹ ‘ಓದೆಲಾ ರೇಲ್ವೇ ಸ್ಟೇಷನ್’ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರೋದು ಗೊತ್ತೇ ಇದೆ. ಈ ಚಿತ್ರ ಈಗ ಆಹಾ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಚಿಟ್ಟೆ ಅಭಿನಯಕ್ಕೆ ತೆಲುಗು ಸಿನಿ ಪ್ರೇಕ್ಷಕ ಫಿದಾ ಆಗಿದ್ದಾರೆ.
ಈ ಸಿನಿಮಾದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದುವರೆಗೂ ಮಾಡಿರದಂತಹ ವಿಶಿಷ್ಟ ಪಾತ್ರದಲ್ಲಿ ವಸಿಷ್ಠ ಅಮೋಘವಾಗಿ ಅಭಿನಯಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಸಿಂಹ ಗೆದ್ದಿದ್ದಾರೆ. ಈ ಚಿತ್ರದಲ್ಲಿ ವಸಿಷ್ಠ ನಾಯಕನಾಗಿಯೂ ಹಾಗೂ ಖಳನಾಯಕನಾಗಿ ಅಬ್ಬರಿಸಿದ್ದಾರೆ.
ಇದನ್ನೂ ಓದಿ: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ
ಅಂದಹಾಗೇ ‘ಓದೆಲಾ ರೇಲ್ವೇ ಸ್ಟೇಷನ್’ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಖರೀಮ್ ನಗರದಲ್ಲಿ ನಡೆದ ಘಟನೆಯೊಂದನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಯುವ ನಿರ್ದೇಶಕ ಅಶೋಕ್ ತೇಜ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಹೆಬಾ ಪಟೇಲ್ ವಸಿಷ್ಠನಿಗೆ ಜೋಡಿಯಾಗಿ ನಟಿಸಿದ್ದಾರೆ.ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ ಈಗ ನಾಯಕನಾಗಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿದ್ದಾರೆ. ಈ ಮೂಲಕ ತೆಲುಗು ನೆಲದಲ್ಲಿ ಗಾಯನದ ಜೊತೆಗೆ ಕಲಾ ಸೇವೆಯನ್ನೂ ಮುಂದುವರೆಸಲಿದ್ದಾರೆ. ಸದ್ಯ ವಸಿಷ್ಠ Love..ಲಿ, ಹೆಡ್ ಬುಷ್, ಸಿಂಬಾ, ತಲ್ವಾರ್ ಪೇಟೆ, ಡೇವಿಲ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.