ಚಿತ್ರದುರ್ಗ : ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ದ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮುರುಘಾ ಮಠದ ಹಾಸ್ಟೇಲ್ ಮಹಿಳಾ ವಾರ್ಡನ್ ಒಬ್ಬರು ದೂರು ದಾಖಲಿಸಿದ್ದು, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರ ವಿರುದ್ದ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ : ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು!
ಅಲ್ಲದೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ವಿರುದ್ದವೂ ಕೂಡಾ ಬ್ಲಾಕ್ ಮೇಲ್ ಕೇಸ್ ದಾಖಲಿಸಲಾಗಿದೆ. ಎಸ್.ಕೆ.ಬಿ.ವಿರುದ್ದ ಕಲಂ 354 ಅಡಿ ಲೈಂಗಿಕ ದೌರ್ಜನ್ಯ ಯತ್ನ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಇನ್ನೂ ಕಲಂ 341, 342,504,506 ಅಡಿ ಕೇಸ್ ದಾಖಲಾಗಿದ್ದು, ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮುರುಗಾ ಶರಣರ ಮೇಲಿನ ಆರೋಪವೇನು? : ಮುರುಘಾ ಶರಣರಿಗೆ ಪ್ರತಿ ವಾರ ಒಂದು ವಿದ್ಯಾರ್ಥಿನಿಗೆ ಹಂಪಲು ನೀಡಲು ಅವರ ಕೋಣೆಗೆ ಕಳಿಸಲಾಗುತ್ತಿತ್ತು. ಅಲ್ಲಿ ಶರಣರು ಇಷ್ಟವಿಲ್ಲ ಎಂದು ಹೇಳಿದರೂ ಹುಡುಗಿಯರ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದರು. ಕೆಲಸವಾದ ನಂತರ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದರು. ಹಾಗೆ, ಶರಣರು ಸ್ವಚ್ಚಗೊಳಿಸಲು ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರಿಗೆ ಸ್ನಾನದ ಕೋಣೆಗೆ ಹೋಗಿ ಸ್ನಾನ ಮಾಡಿ ಹೋಗುವಂತೆ ಹೇಳುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರತಿನಿತ್ಯ ಒಂದು ಹುಡುಗಿಯನ್ನು ಆಪ್ತ ಸಹಾಯಕರು ಕರೆದುಕೊಂಡು ಹೋಗಿ ಶರಣರ ಜೊತೆ ಕೋಣೆಯಲ್ಲಿ ಕೂಡಿಹಾಕುತ್ತಿದ್ದರು. ಹಲವಾರು ಬಾರಿ ಈ ರೀತಿ ನಡೆದ ನಂತರ ಅದರ ವಿಡಿಯೋಗಳನ್ನು ಕೂಡ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಶರಣರು ಅವರ ವಿರುದ್ಧದ ಯಾವುದೇ ವರದಿಯನ್ನು ಬಿತ್ತರಿಸದಂತೆ ಕೋರ್ಟ್ನಿಂದ ಆದೇಶ ಪಡೆದಿದ್ದಾರೆ.
ಇದನ್ನೂ ಓದಿ : Viral Video: ಮಲಗಿದ್ದ ಮಹಿಳೆಯ ಮೇಲೆ ಹೆಡೆ ಎತ್ತಿ ಕುಳಿತ ನಾಗರಹಾವು!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.