ದಕ್ಷಿಣ ಕನ್ನಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆ..!

ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ.

Written by - Zee Kannada News Desk | Last Updated : Aug 28, 2022, 09:18 PM IST
  • ಈಗಾಗಲೇ ಪರಿಕರಗಳನ್ನು ತೊಳೆದು ಸ್ವಚ್ಚಗೊಳಿಸಿದ್ದೇವೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಮಾಹಿತಿ ನೀಡುವುದಾಗಿ ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆ..! title=

ಬೆಂಗಳೂರು : ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ.

ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ. ರಬ್ಬರ್ ತೋಟ ತೆರವು ಮಾಡಿ ಅಡಿಕೆ ತೋಟದ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಿಕೆ ಗುಂಡಿ ತೆಗೆಯುವಾಗ ಇವು ಕಾಣಸಿಕ್ಕಿವೆ.‌

ಇದನ್ನೂ ಓದಿ: Karnataka Hijab Ban: ನಾಳೆ ಸುಪ್ರೀಂನಲ್ಲಿ ಹೈಕೋರ್ಟ್ ಆದೇಶ ವಿರುದ್ಧದ ಅರ್ಜಿ ವಿಚಾರಣೆ

ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲವಾದ ಭಾಗ ಗೋಚರಿಸಿದ್ದು ಇಲ್ಲಿ ಗುಹೆಯಾಕಾರ ಮಾದರಿ ಪತ್ತೆಯಾಗಿದೆ.‌ ಅದನ್ನು ಸೂಕ್ಷವಾಗಿ ಗಮನಿಸಿದಾಗ ಇದರೊಳಗಡೆ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿದೆ. ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆ ಕಂಡುಬಂದಿದೆ.

ಇದನ್ನೂ ಓದಿ: ಈ ಬಾರಿ ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಭರ್ಜರಿ ತಯಾರಿ..!

ಅಧ್ಯಯನ ಹಂತದಲ್ಲಿ ಪುರಾತನ ಕಾಲದಲ್ಲಿ ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದು ಎಂಬ ಮಾತು ಸ್ಥಳೀಯವಾಗಿ ಕೇಳಿಬರುತ್ತಿದೆ.ಉಡುಪಿಯ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್, ಪ್ರಾಚ್ಯವಸ್ತು ಸಂಶೋಧಕ ಪ್ರೊ.ಟಿ.ಮುರುಗೇಶಿ ಅವರು ಸ್ಥಳಕ್ಕೆ ಆಗಮಿಸಿ ಪರಿಕರಗಳನ್ನು ಸಂಗ್ರಹಿಸಿ, ಅಧ್ಯಯನ ನಡೆಸುತ್ತಿದ್ದಾರೆ.

ಈಗಾಗಲೇ ಪರಿಕರಗಳನ್ನು ತೊಳೆದು ಸ್ವಚ್ಚಗೊಳಿಸಿದ್ದೇವೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಮಾಹಿತಿ ನೀಡುವುದಾಗಿ ಅವರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News