IND vs SL: ಲಂಕಾ ವಿರುದ್ಧ ಭಾರತಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ: ಪ್ಲೇಯಿಂಗ್ XIನಲ್ಲಿ ಭಾರೀ ಬದಲಾವಣೆ!

ಆರಂಭಿಕ ಜೋಡಿ ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಪಾಕಿಸ್ತಾನದ ವಿರುದ್ಧ ಅಬ್ಬರಿಸಿದ್ದರು. ಇವರಿಬ್ಬರು 50ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವಾಡಿದ್ದರು. ಇದಾದ ನಂತರ ಪವರ್‌ಪ್ಲೇನಲ್ಲಿಯೂ ಇಬ್ಬರೂ ಒಟ್ಟಾಗಿ ಪಾಕಿಸ್ತಾನಿ ತಂಡದ ಬೌಲಿಂಗ್ ನ್ನು ಎದುರಿಸಿದ್ದರು.

Written by - Bhavishya Shetty | Last Updated : Sep 6, 2022, 12:42 PM IST
    • ಇಂದು ಭಾರತ ಶ್ರೀಲಂಕಾ ನಡುವೆ ಹಣಾಹಣಿ
    • ಭಾರತ ತಂಡ ಫೈನಲ್ ಪ್ರವೇಶಿಸಬೇಕಾದರೆ ಗೆಲ್ಲಲೇಬೇಕಾದ ಅನಿವಾರ್ಯತೆ
    • ಪ್ಲೇಯಿಂಗ್ ಇಲೆವೆನ್ ನಲ್ಲಿ ಭಾರೀ ಬದಲಾವಣೆ ಸಾಧ್ಯತೆ
IND vs SL: ಲಂಕಾ ವಿರುದ್ಧ ಭಾರತಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ: ಪ್ಲೇಯಿಂಗ್ XIನಲ್ಲಿ ಭಾರೀ ಬದಲಾವಣೆ! title=
IND vs SL

ಭಾರತ ತಂಡವು ತನ್ನ ಗುಂಪಿನ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಹಾಂಕಾಂಗ್ ಅನ್ನು ಸೋಲಿಸಿದೆ, ಆದರೆ ಸೂಪರ್-4 ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 5 ವಿಕೆಟ್‌ಗಳ ಸೋಲು ಅನುಭವಿಸಬೇಕಾಯಿತು. ಈ ಹಿನ್ನೆಲೆಯಲ್ಲಿ ಇಂದು (ಸೆಪ್ಟೆಂಬರ್ 6) ನಡೆಯಲಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ.

ಫೈನಲ್ ತಲುಪಲು ನಾಯಕ ರೋಹಿತ್ ಶರ್ಮಾ ತಂಡದ ಪ್ಲೇಯಿಂಗ್ 11ರಲ್ಲಿ ದೊಡ್ಡ ಬದಲಾವಣೆ ಮಾಡುವ ಸಾಧ್ಯತೆಯಿದೆ. ಪಾಕಿಸ್ತಾನ ವಿರುದ್ಧದ ಸೋಲಿನ ನಂತರ ಟೀಂ ಇಂಡಿಯಾದಲ್ಲಿ ಹಲವು ದೊಡ್ಡ ಬದಲಾವಣೆಗಳು ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. 

ಇದನ್ನೂ ಓದಿ: Asia Cup 2022: ‘ನಾನಿಲ್ಲಿರೋದು ಕೊಹ್ಲಿಗಾಗಿ’: ಪಾಕ್ ಸುಂದರಿಯ ಸಂದೇಶ ಕಂಡು ವಿರಾಟ್ ಏನಂದ್ರು?

ಆರಂಭಿಕ ಜೋಡಿ ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಪಾಕಿಸ್ತಾನದ ವಿರುದ್ಧ ಅಬ್ಬರಿಸಿದ್ದರು. ಇವರಿಬ್ಬರು 50ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವಾಡಿದ್ದರು. ಇದಾದ ನಂತರ ಪವರ್‌ಪ್ಲೇನಲ್ಲಿಯೂ ಇಬ್ಬರೂ ಒಟ್ಟಾಗಿ ಪಾಕಿಸ್ತಾನಿ ತಂಡದ ಬೌಲಿಂಗ್ ನ್ನು ಎದುರಿಸಿದ್ದರು. ಇದಾದ ಬಳಿಕ ಬಿರುಸಿನ ಇನ್ನಿಂಗ್ಸ್ ಆಡುವ ವೇಳೆ ವಿರಾಟ್ ಕೊಹ್ಲಿ 60 ರನ್ ಗಳ ಇನಿಂಗ್ಸ್ ಆಡಿದರು. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ವಿರುದ್ಧ ಮೂವರೂ ಬ್ಯಾಟ್ಸ್ ಮನ್ ಗಳು ಆಡುವುದು ನಿಶ್ಚಿತ.

ಇನ್ನು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಪಾಕಿಸ್ತಾನದ ವಿರುದ್ಧ ಕೆಟ್ಟದಾಗಿ ಆಟವಾಡಿದ್ದರು. ಸೂರ್ಯಕುಮಾರ್ ಯಾದವ್ ಕೇವಲ 13 ರನ್ ಗಳಿಸಿದರು. ಇನ್ನೊಂದೆಡೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಕೇವಲ 10 ರನ್ ಗಳಿಸಿ ಪೆವಿಲಿಯನ್ ಕಡೆ ಮುಖ ಮಾಡಿದರು. ಇಂತಹ ಪರಿಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅವರ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಅವರನ್ನು ಸೇರಿಸಿಕೊಳ್ಳಬಹುದು. ಅದೇ ಸಮಯದಲ್ಲಿ, ಹಾರ್ದಿಕ್ ಪಾಂಡ್ಯ ಅವರನ್ನು 6 ನೇ ಸ್ಥಾನದಲ್ಲಿ ಕಣಕ್ಕಿಳಿಸಬಹುದು. ಆಲ್ ರೌಂಡರ್ ಜವಾಬ್ದಾರಿಯನ್ನು ದೀಪಕ್ ಹೂಡಾ ಅವರಿಗೆ ವಹಿಸಬಹುದು.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರವಿ ಬಿಷ್ಣೋಯ್ ಹೊರತುಪಡಿಸಿ ಉಳಿದೆಲ್ಲ ಬೌಲರ್‌ಗಳು ಕಳಪೆ ಪ್ರದರ್ಶನ ನೀಡಿದರು. ಈ ಬೌಲರ್‌ಗಳ ವಿರುದ್ಧ ಪಾಕಿಸ್ತಾನದ ಬ್ಯಾಟ್ಸ್‌ಮನ್‌ಗಳು ಸಾಕಷ್ಟು ರನ್ ಗಳಿಸಿದರು. ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ತುಂಬಾ ಸಹ ುತ್ತಮ ಪ್ರದರ್ಶನ ನೀಡಿರಲಿಲ್ಲ. ಅವರು ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ 43 ರನ್ ನೀಡಿ, ಕೇವಲ ಒಂದು ವಿಕೆಟ್ ಪಡೆದರು. ಇಂತಹ ಪರಿಸ್ಥಿತಿಯಲ್ಲಿ ಅವರ ಜಾಗಕ್ಕೆ ರವಿಚಂದ್ರನ್ ಅಶ್ವಿನ್ ಅವರನ್ನು ಸೇರಿಸಿಕೊಳ್ಳಬಹುದು. ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ಅವರಿಗೆ ಮತ್ತೊಂದು ಅವಕಾಶ ನೀಡಬಹುದು. 

ಇದನ್ನೂ ಓದಿ: Rohit Sharma: ಟೀಂ ಇಂಡಿಯಾ ನಾಯಕನೊಂದಿಗೆ ಪಾಕ್ ಅಭಿಮಾನಿಗಳ ಸೆಲ್ಫಿ, ವಿಡಿಯೋ ವೈರಲ್

ಶ್ರೀಲಂಕಾ ವಿರುದ್ಧ ಭಾರತ ತಂಡದ ಸಂಭಾವ್ಯ ಆಟಗಾರರ ಪಟ್ಟಿ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ರವಿ ಬಿಶ್ವೋಯ್, ರವಿಚಂದ್ರನ್ ಅಶ್ವಿನ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News