ಕಲಬುರ್ಗಿ: ನಾಡಿನ ಜನತೆಗೆ ತೈಲ ಬೆಲೆ ಹೇರಿಕೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕನಿಷ್ಠ 2.ರೂಪಾಯಿಗೆ ಇಳಿಸಲಾಗುವುದು ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಲಬುರ್ಗಿಯ ಹೈದರಾಬಾದ್ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಕುಮಾರಸ್ವಾಮಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು, ಆ ಸಮಯದಲ್ಲಿ ಜನ ಸಾಮಾನ್ಯರ ಬವಣೆಯನ್ನು ಅರಿತುಕೊಂಡು ಬೆಲೆ ಇಳಿಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಕುರಿತು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಸಿಎಂ ಕುಮಾರಸ್ವಾಮಿ, ದರವನ್ನು 3 ರಿಂದ 4 ರೂ.ನಷ್ಟು ಇಳಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸುವಂತೆ ಸೂಚಿಸಿದ್ದರು. ಆದರೆ, ಅಷ್ಟು ಪ್ರಮಾಣದಲ್ಲಿ ಸೆಸ್ ಕಡಿಮೆ ಮಾಡಿದರೆ ರಾಜ್ಯದ ಅರ್ಥ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಅದರ ಬದಲು ಸಾಲ ಮನ್ನಾ ಕಾರಣಕ್ಕಾಗಿ ಬಜೆಟ್‌ನಲ್ಲಿ ಹೆಚ್ಚಿಸಿದ್ದ ಶೇ. 2ರಷ್ಟು ಸೆಸ್ ಕೈಬಿಡಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದರು.