ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಹೈ ಕೋರ್ಟ್ ಎಸಿಬಿ ರದ್ದುಗೊಳಿಸಿ ಆದೇಶ ಹೊರಡಿಸಿದ ತಿಂಗಳ ಬಳಿಕ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭ್ರಷ್ಟಾಚಾರ ನಿಗ್ರಹ ದಳವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಇದನ್ನು ರಚನೆ ಮಾಡಲಾಗಿತ್ತು. ಇತ್ತಿಚೇಗೆ ಎಸಿಬಿಯಲ್ಲೆ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ : Bangalore Traffic Problem : ಬೆಂಗಳೂರು ಸಂಚಾರ ದಟ್ಟಣೆಗೆ ಸ್ಕೈ ಬಸ್, ಟ್ರಾಲಿ ಬಸ್ ಕೇಂದ್ರ ಸಚಿವ ಗಡ್ಕರಿ ಸಲಹೆ!
ಆಗಸ್ಟ್ 11 ರಂದು ಹೈ ಕೋರ್ಟ್ ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರವರಿದ್ದ ಪೀಠ ತೀರ್ಪು ನೀಡಿತ್ತು. ಎಸಿಬಿ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು.
ಅಂದು ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಜಾತಿ, ಧರ್ಮ, ಪಂಥಗಳ ಆಧಾರದಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ನೇಮಕ ಮಾಡದೇ ಅರ್ಹತೆಯ ಆಧಾರದಲ್ಲಿಯೇ ನೇಮಕ ಮಾಡಬೇಕೆಂದು ತಾಕೀತು ಮಾಡಿದೆ. ಲೋಕಾಯುಕ್ತ ವರದಿಗಳನ್ನು ತಿರಸ್ಕರಿಸುವ ಸರ್ಕಾರದ ಕ್ರಮಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಸಂಬಂಧ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವೆಂದು ಶಿಫಾರಸ್ಸು ಮಾಡಿದೆ. ಇನ್ನು ಲೋಕಾಯುಕ್ತ ಪೊಲೀಸ್ ಠಾಣೆಗೆ ನಿಯೋಜನೆಯಾಗುವ ಅಧಿಕಾರಿಗಳಿಗೆ ಕನಿಷ್ಟ 3 ವರ್ಷ ಸೇವಾವಧಿ ನಿಗದಿಪಡಿಸುವಂತೆಯೂ ನಿರ್ದೇಶನ ನೀಡಿದೆ.
ಇದನ್ನೂ ಓದಿ : Nitin Gadkari : ಮೈಸೂರು ಹೆದ್ದಾರಿ-ಪೀಣ್ಯ ಮೇಲ್ಸೇತುವೆ ದೋಷ : ತಪ್ಪು ಒಪ್ಪಿಕೊಂಡ ಗಡ್ಕರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.