ಪರಿಶಿಷ್ಟ ಪಂಗಡಕ್ಕೆ ಬೆಟ್ಟ ಕುರುಬ ಸಮುದಾಯ ಸೇರ್ಪಡೆ, ಸಿದ್ಧರಾಮಯ್ಯ ಸ್ವಾಗತ

ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ.

Written by - Zee Kannada News Desk | Last Updated : Sep 14, 2022, 10:06 PM IST
  • ಸುಮಾರು ಎರಡುವರೆ ವರ್ಷಗಳ ನಂತರ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.
ಪರಿಶಿಷ್ಟ ಪಂಗಡಕ್ಕೆ ಬೆಟ್ಟ ಕುರುಬ ಸಮುದಾಯ ಸೇರ್ಪಡೆ, ಸಿದ್ಧರಾಮಯ್ಯ ಸ್ವಾಗತ  title=
file photo

ಬೆಂಗಳೂರು: ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತಾಗಿ ಅವರು ಕೇಂದ್ರದ ನಿರ್ಧಾರವನ್ನು ಶ್ಲಾಘಿಸುತ್ತಾ "ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಸಮುದಾಯದ ಬಹುಕಾಲದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು.

 

ಅದರ ಶಿಫಾರಸಿನ ಆಧಾರದಲ್ಲಿ ಕಾಡು ಕುರುಬ ಜಾತಿ ಸೂಚಕಕ್ಕೆ ಸಮನಾರ್ಥ ಹೊಂದಿರುವ ಬೆಟ್ಟಕುರುಬರನ್ನು ಕೂಡಾ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. 

ಸುಮಾರು ಎರಡುವರೆ ವರ್ಷಗಳ ನಂತರ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇಲ್ಲಿಯ ವರೆಗೆ ಮೀಸಲಾತಿ ಸೌಲಭ್ಯದಿಂದಲೇ ವಂಚಿತರಾಗಿದ್ದ ಬೆಟ್ಟ ಕುರುಬ ಸಮುದಾಯದ ಜನ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯ ಲಾಭ ಪಡೆದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶ-ಪ್ರಾತಿನಿಧ್ಯ ಪಡೆದು ಬೆಳೆಯಲಿ ಎಂದು ಆಶಿಸುತ್ತೇನೆ" ಎಂದು ಅವರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News