IND vs AUS: ಆಸ್ಟ್ರೇಲಿಯಾ ವಿರುದ್ಧದ T20 ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ದೊಡ್ಡ ಹೊಡೆತ!

ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಟಿ-20 ಪಂದ್ಯಗಳ ಸರಣಿ ಆಡಬೇಕಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಬೌಲರ್‌ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇದರಿಂದ ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

Written by - Puttaraj K Alur | Last Updated : Sep 18, 2022, 09:30 AM IST
  • ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್‍ಗೆ ಕೋವಿಡ್ ಪಾಸಿಟಿವ್
  • ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯಿಂದ ಮೊಹಮ್ಮದ್ ಶಮಿ ಔಟ್
  • ಕೊರೊನಾದಿಂದ ಚೇತರಿಸಿಕೊಳ್ಳದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಆಡುವುದೂ ಡೌಟ್

Trending Photos

IND vs AUS: ಆಸ್ಟ್ರೇಲಿಯಾ ವಿರುದ್ಧದ T20 ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ದೊಡ್ಡ ಹೊಡೆತ! title=
ಮೊಹಮ್ಮದ್ ಶಮಿಗೆ ಕೊರೊನಾ ಪಾಸಿಟಿವ್

ನವದೆಹಲಿ: T20 ವಿಶ್ವಕಪ್‌ಗೂ ಮೊದಲು ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ T20 ಸರಣಿ ಆಡಬೇಕಾಗಿದೆ. ಆದರೆ ಇದಕ್ಕೂ ಮೊದಲೇ ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್‍ಗೆ ಕೋವಿಡ್ -19 ಪಾಸಿಟಿವ್ ಆಗಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದು ಭಾರತ ತಂಡಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ.  

 ಆಸೀಸ್ ವಿರುದ್ಧದ ಸರಣಿಯಿಂದ ಈ ಆಟಗಾರ ಔಟ್!

ವರದಿಯ ಪ್ರಕಾರ ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಮೊಹಮ್ಮದ್ ಶಮಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಭಾರತ ತಂಡವು ಶನಿವಾರ ಮೊಹಾಲಿ ತಲುಪಿದಾಗ ಬಿಸಿಸಿಐ ಮತ್ತು ತಂಡದ ನಿರ್ವಹಣೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ದೊರೆತಿದೆ. ಭಾರತದ ವಿರುದ್ಧ ಸರಣಿ ಆಡಲು ಆಸ್ಟ್ರೇಲಿಯಾ ತಂಡ ಪಂಜಾಬ್ ನಗರಕ್ಕೆ ಬಂದಿಳಿದಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯವು ಮೊಹಾಲಿ ಮೈದಾನದಲ್ಲಿ ನಡೆಯಲಿದೆ.

ಇದನ್ನೂ ಓದಿ: New Rule in IPL: ಇನ್ಮುಂದೆ IPLನಲ್ಲಿ ಒಂದು ತಂಡದಿಂದ 15 ಆಟಗಾರರು ಆಡಬಹುದು:ಹೇಗೆ ಸಾಧ್ಯ?

ಭಾರತ ತಂಡಕ್ಕೆ ದೊಡ್ಡ ಹೊಡೆತ!

ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದು ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಶಮಿ ಕಳೆದ ವರ್ಷ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಕೊನೆಯ ಟಿ-20 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಅಂದಿನಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಮೊಹಮ್ಮದ್ ಶಮಿ ಭಾರತ ಪರ 17 ಟಿ-20 ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧವೂ ಆಡುವುದು ಕಷ್ಟ !

ಮೊಹಮ್ಮದ್ ಶಮಿ ಕೊರೊನಾದಿಂದ ಚೇತರಿಸಿಕೊಳ್ಳದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧವೂ ಆಡುವುದು ಅವರಿಗೆ ಕಷ್ಟವಾಗಲಿದೆ. ಟಿ-20 ವಿಶ್ವಕಪ್‌ಗೆ ಆಯ್ಕೆಗಾರರು ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮೊಹಮ್ಮದ್ ಶಮಿಗೆ ಸ್ಥಾನ ನೀಡಿದ್ದಾರೆ. ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಅವರಿಗೆ ಮುಖ್ಯ ತಂಡದಲ್ಲಿ ಅವಕಾಶ ನೀಡಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 3 ಟಿ-20 ಪಂದ್ಯಗಳು ಕ್ರಮವಾಗಿ ತಿರುವನಂತಪುರಂ, ಗುವಾಹಟಿ ಮತ್ತು ಇಂದೋರ್‌ನಲ್ಲಿ ಸೆಪ್ಟೆಂಬರ್ 28, ಅಕ್ಟೋಬರ್ 2 ಮತ್ತು ಅಕ್ಟೋಬರ್ 4ರಂದು ನಡೆಯಲಿವೆ.

ಇದನ್ನೂ ಓದಿ: ಬೆಂಗಳೂರಲ್ಲಿ ಬೈಕ್‌ಗಳ ಸದ್ದು: ಕರ್ನಾಟಕದ ನಟರಾಜ್ ಚಾಂಪಿಯನ್

ಶಿಖರ್ ಧವನ್ ಕ್ಯಾಪ್ಟನ್

ದಕ್ಷಿಣ ಆಫ್ರಿಕಾವು ಅಕ್ಟೋಬರ್ 6, 9 ಮತ್ತು 11ರಂದು ಲಕ್ನೋ, ರಾಂಚಿ ಮತ್ತು ದೆಹಲಿಯಲ್ಲಿ ಭಾರತದ ವಿರುದ್ಧ 3 ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ. ಆದರೆ ಟಿ-20 ತಂಡದ ಯಾವುದೇ ಆಟಗಾರರು ಏಕದಿನ ಪಂದ್ಯಗಳಲ್ಲಿ ಆಡುವುದಿಲ್ಲ. ಶಿಖರ್ ಧವನ್ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸರಣಿ ಆಡಲಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News