ಲೈಂಗಿಕ ಕಿರುಕುಳ ಆರೋಪ: ಕಾಂಗ್ರೆಸ್ ಮುಖಂಡನ ಬಂಧನ..!

ಯುವತಿ ನೀಡಿದ ದೂರಿನನ್ವಯ ಕಾಂಗ್ರೆಸ್ ಮುಖಂಡ ಮನೋಜ್ ಕರ್ಜಗಿಯನ್ನು ವಿದ್ಯಾಗಿರಿ ಪೊಲೀಸರು ಬಂಧಿಸಿದ್ದಾರೆ.

Written by - Zee Kannada News Desk | Last Updated : Sep 18, 2022, 11:22 AM IST
  • ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಕಾಂಗ್ರೆಸ್ ಮುಖಂಡನ ಬಂಧನ
  • ಬ್ಯುಟಿ ಪಾರ್ಲರನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ
  • ಮನೋಜ್ ಕರ್ಜಗಿಯನ್ನು ಬಂಧಿಸಿದ ಧಾರವಾಡದ ವಿದ್ಯಾಗಿರಿ ಪೊಲೀಸರು
ಲೈಂಗಿಕ ಕಿರುಕುಳ ಆರೋಪ: ಕಾಂಗ್ರೆಸ್ ಮುಖಂಡನ ಬಂಧನ..! title=
ಕಾಂಗ್ರೆಸ್ ಮುಖಂಡನ ಬಂಧನ

ಧಾರವಾಡ: ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಮನೋಜ್ ಕರ್ಜಗಿ ಬಂಧಿತ ಕಾಂಗ್ರೆಸ್ ಮುಖಂಡ. ತನ್ನ ಬ್ಯುಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರಿಯಾಂಕಾ(19) ಎಂಬಾಕೆ ಜೊತೆಗೆ ಅನುಚಿತವಾಗಿ ವರ್ತಿಸಿದ ಮನೋಜ್ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪ ಕೇಳಿಬಂದಿದೆ.

ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿರುವ ಲೇ ಮೋರ್ಜ್ ಸ್ಪಾನಲ್ಲಿ ಈ ಘಟನೆ ನಡೆದಿದೆ.  ಮನೋಜ್ ಲೈಂಗಿಕ ಕಿರುಕುಳ ನೀಡಿರುವ ಕುರಿತು ಸಂತ್ರಸ್ತ ಯುವತಿ ದೂರು ದಾಖಲಿಸಿದ್ದಳು.  

ಇದನ್ನೂ ಓದಿ: PSI Recruitment Scam: ಪ್ರಕರಣದ 36ನೇ ಆರೋಪಿ ಸಿದ್ದರಾಜು ಅರೆಸ್ಟ್!

ಯುವತಿ ನೀಡಿದ ದೂರಿನನ್ವಯ ಮನೋಜ್ ಕರ್ಜಗಿಯನ್ನು ವಿದ್ಯಾಗಿರಿ ಪೊಲೀಸರು ಬಂಧಿಸಿದ್ದಾರೆ. ಇನ್ನು ತನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಯುವತಿ ಕಡೆಯವರ ಮೇಲೆ ಮನೋಜ್ ಪ್ರತಿ ದೂರು ದಾಖಲಿಸಿದ್ದಾನೆ.

ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಅಂಗಡಿಗೆ ನುಗ್ಗಿ ಮನೋಜ್ನ ಮೇಲೆ ಯುವತಿ ಕಡೆಯವರು ಮಾರಣಾಂತಿಕ ದಾಳಿ ಮಾಡಿದ್ದರು. ಈ ಸಂಬಂಧ ಯುವತಿ ಕಡೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತನೂ ಆಗಿರೋ ಬಂಧಿತ ಮನೋಜ್ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯಲ್ಲಿ ನಿರ್ದೇಶಕನಾಗಿದ್ದ. ಸದ್ಯ ಮನೋಜ್ ಬಂಧಿಸಿರುವ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News