ಮಾತಿನಮನೆಯಲ್ಲಿ "ಉಪಾಧ್ಯಕ್ಷ"

ಉಮಾಪತಿ ಫಿಲಂಸ್ ಅರ್ಪಿಸುವ, ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ್ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್  ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Written by - YASHODHA POOJARI | Edited by - Yashaswini V | Last Updated : Sep 20, 2022, 11:08 AM IST
  • "ಉಪಾಧ್ಯಕ್ಷ" ಚಿತ್ರದ ಮೂಲಕ ನಾಯಕ ನಟನಾಗಿ ಪದಾರ್ಪಣೆ ಮಾಡಲಿರು ಚಿಕ್ಕಣ್ಣ
  • ಈಗಾಗಲೇ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ
  • ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
ಮಾತಿನಮನೆಯಲ್ಲಿ "ಉಪಾಧ್ಯಕ್ಷ"  title=
Upadhyaksha

ಬೆಂಗಳೂರು: "ಅಧ್ಯಕ್ಷ" ಚಿತ್ರದಲ್ಲಿ  ಚಿಕ್ಕಣ್ಣ "ಉಪಾಧ್ಯಕ್ಷ" ರಾಗಿ ಜನಪ್ರಿಯರಾಗಿದ್ದರು. ಈಗ "ಉಪಾಧ್ಯಕ್ಷ" ಚಿತ್ರದಲ್ಲಿ ಅವರೇ ನಾಯಕರಾಗಿ ನಟಿಸುತ್ತಿದ್ದಾರೆ. 

ಉಮಾಪತಿ ಫಿಲಂಸ್ ಅರ್ಪಿಸುವ, ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ್ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್  ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ- Actress Suicide: ಡೆತ್‌ನೋಟ್‌ ಬರೆದಿಟ್ಟು ಯುವನಟಿ ಆತ್ಮಹತ್ಯೆ..!

ಈಗಾಗಲೇ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ ಮುಂತಾದ ಕಡೆ ಐವತ್ತಕ್ಕೂ ಅಧಿಕ ದಿನಗಳ "ಉಪಾಧ್ಯಕ್ಷ" ಸಿನಿಮಾದ ಚಿತ್ರೀಕರಣ ನಡೆದಿದೆ.

ಚಿಕ್ಕಣ್ಣ ಅವರಿಗೆ ನಾಯಕಿಯಾಗಿ ಮಲೈಕ ನಟಿಸುತ್ತಿದ್ದಾರೆ. ಸಾಧುಕೋಕಿಲ, ರವಿಶಂಕರ್, ವೀಣಾಸುಂದರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ- Bigg Boss : ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಡಲಿದ್ದಾರೆ ಈ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ.!

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ 
ಮಾಡಿ.

Trending News