Team India, T20 World Cup 2022 : ಟಿ20 ವಿಶ್ವಕಪ್ 2022 ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗಲಿದೆ. ಈ ದೊಡ್ಡ ಟೂರ್ನಿಗೂ ಮುನ್ನ ಟೀಂ ಇಂಡಿಯಾ ತನ್ನ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡುತ್ತಿದ್ದು, ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಿದೆ. ಈ ಮಧ್ಯೆ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಸಂಬಂಧಿಸಿದಂತೆ ಬಿಗ್ ನ್ಯೂಸ್ ಒಂದು ಹೊರಬಿದಿದೆ. ಈ ಸರಣಿಯ ಮಧ್ಯದಲ್ಲಿ ರಾಹುಲ್ ದ್ರಾವಿಡ್ ಬಿಸಿಸಿಐ ಮುಂದೆ 2 ಬೇಡಿಕೆಗಳನ್ನು ಇಟ್ಟಿದ್ದಾರೆ. ಹಾಗಿದ್ರೆ ಈ ಬೇಡಿಕೆಗಳು ಯಾವವು ಇಲ್ಲಿದೆ ನೋಡಿ..
ದೊಡ್ಡ ಹೆಜ್ಜೆ ಇಟ್ಟ ರಾಹುಲ್ ದ್ರಾವಿಡ್
ಟಿ20 ವಿಶ್ವಕಪ್ 2022 ಗಾಗಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾದ ಸಿದ್ಧತೆಗಳು ವೇಗವಾಗಿವೆ, ಆದರೆ ತಂಡದ ಕಳಪೆ ಪ್ರದರ್ಶನದ ದೃಷ್ಟಿಯಿಂದ, ರಾಹುಲ್ ದ್ರಾವಿಡ್ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ನೀಡಿರುವ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್‌ಗೆ ಮುನ್ನ ಹೆಚ್ಚಿನ ಅಭ್ಯಾಸ ಪಂದ್ಯಗಳನ್ನು ನಡೆಸುವಂತೆ ರಾಹುಲ್ ದ್ರಾವಿಡ್ ಬಿಸಿಸಿಐ ಮುಂದೆ ಬೇಡಿಕೆ ಇಟ್ಟಿದ್ದಾರೆ. ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ತಂಡ ನಿಗದಿತ ಸಮಯಕ್ಕಿಂತ ಒಂದು ವಾರ ಮುಂಚಿತವಾಗಿ ಆಸ್ಟ್ರೇಲಿಯಾ ತಲುಪಲಿದೆ.
ಇದನ್ನೂ ಓದಿ : IND vs AUS T20i: ಭಾರತ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ: ಮೊದಲ ಪಂದ್ಯದಲ್ಲೇ ಸೋಲು ಕಂಡ ಟೀಂ ಇಂಡಿಯಾ!
ಇದೇ ದಿನದಂದು ಆಸ್ಟ್ರೇಲಿಯಾಕ್ಕೆ ತೆರಳಲಿದೆ ಟೀಂ ಇಂಡಿಯಾ
ಅಕ್ಟೋಬರ್ 4 ರಂದು ಇಂದೋರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದ ನಂತರವೇ ಆಸ್ಟ್ರೇಲಿಯಾವನ್ನು ಕಳುಹಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ. ಬಿಸಿಸಿಐ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ, “ಐಸಿಸಿ ನಡೆಸುವ ಅಭ್ಯಾಸ ಪಂದ್ಯಗಳ ಜೊತೆಗೆ ನಮ್ಮೊಂದಿಗೆ ಪಂದ್ಯಗಳನ್ನು ಆಡುವ ಕೆಲವು ತಂಡಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ. ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಯೊಂದಿಗೆ ಟಿ20 ವಿಶ್ವಕಪ್‌ನ ಸಂಪೂರ್ಣ ತಂಡವು ಅಕ್ಟೋಬರ್ 5 ರಂದು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಇಲ್ಲಿ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯವನ್ನು ಆಡಲಿರುವ ಭಾರತ ತಂಡವು ವಿವಿಎಸ್ ಲಕ್ಷ್ಮಣ್ ಅವರ ತರಬೇತಿಯ ಎರಡನೇ ದರ್ಜೆಯ ತಂಡವಾಗಿದೆ. ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಸಂಪರ್ಕಿಸಿದ ಬಳಿಕ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
ಟೀಂ ಇಂಡಿಯಾ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ
ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಟೀಂ ಇಂಡಿಯಾ 2 ಅಭ್ಯಾಸ ಪಂದ್ಯಗಳನ್ನು ಆಡಬೇಕಿದೆ ಎಂದು ನಿಮಗೆ ಹೇಳೋಣ. ಈ ಎರಡು ಅಭ್ಯಾಸ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಅಕ್ಟೋಬರ್ 17 ರಂದು ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಪಂದ್ಯ ನಡೆಯಲಿದ್ದು, ಅಕ್ಟೋಬರ್ 18 ರಂದು ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸಲಿದೆ.
2022 ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಪಂದ್ಯಗಳು
ಭಾರತ vs ಪಾಕಿಸ್ತಾನ ಮೊದಲ ಪಂದ್ಯ ಅಕ್ಟೋಬರ್ 23 (ಮೆಲ್ಬೋರ್ನ್)
ಭಾರತ vs ಗ್ರೂಪ್ ಎ ರನ್ನರ್ ಅಪ್ 2 ನೇ ಪಂದ್ಯ ಅಕ್ಟೋಬರ್ 27 (ಸಿಡ್ನಿ)
ಭಾರತ vs ದಕ್ಷಿಣ ಆಫ್ರಿಕಾ 3ನೇ ಪಂದ್ಯ ಅಕ್ಟೋಬರ್ 30 (ಪರ್ತ್)
ಭಾರತ vs ಬಾಂಗ್ಲಾದೇಶ 4 ನೇ ಪಂದ್ಯ ನವೆಂಬರ್ 2 (ಅಡಿಲೇಡ್)
ಭಾರತ vs ಗುಂಪು ಬಿ ವಿಜೇತ 5 ನೇ ಪಂದ್ಯ ನವೆಂಬರ್ 6 (ಮೆಲ್ಬೋರ್ನ್)
ಇದನ್ನೂ ಓದಿ : IND vs AUS T20i: ಇಂಡೋ-ಆಸಿಸ್ ಮುಖಾಮುಖಿ: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ
ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ವೈ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಬಿ. ಕುಮಾರ್ ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಸ್ಟ್ಯಾಂಡ್‌ಬೈ ಆಟಗಾರರು- ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.