Pakistan Zindabad Slogans In Pune: ಪುಣೆಯಿಂದ ಇತ್ತೀಚಿಗೆ ವರದಿಯಾದ ಪಾಕ್ ಪರ ಘೋಷಣೆಗಳನ್ನು ಕೂಗಿದವರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ ಶಾಸಕ ನಿತೇಶ್ ರಾಣೆ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾವನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೇಲೆ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು. ಈ ವಿಡಿಯೋದಲ್ಲಿ ಪುಣೆಯಲ್ಲಿ ಪಿಎಫ್ಐ ವತಿಯಿಂದ ಹಮ್ಮಿಕೊಳ್ಳಲಾದ ವಿರೋಧ ಪ್ರದರ್ಶನದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಹೇಳಲಾಗಿದೆ ಎನ್ನಲಾಗಿದೆ. ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದ ಮಹಾರಾಷ್ಟ್ರ ಸರ್ಕಾರ ಹಾಗೂ ಬಿಜೆಪಿ, ಘೋಷಣೆಗಳನ್ನು ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದವು.
To all those shouting Pakistan Zindabad slogans in support of PFI in Pune..
Chun chun ke marenge.. Itna yaad rakana!!! #BanPfi
— nitesh rane (@NiteshNRane) September 24, 2022
ಪಿಎಫ್ಐ ಬೆಂಬಲಿಸಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳು
ಆದರೆ, ಇದೀಗ ಪುಣೆಯಲ್ಲಿ PFI ಬೆಂಬಲಿಸಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದವರನ್ನುದ್ದೇಶಿಸಿ ಟ್ವೀಟ್ ಮಾಡಿರುವ ನಿತೇಶ್ ರಾಣೆ '..ಹೆಕ್ಕಿ ಹೆಕ್ಕಿ ಹೊಡೆಯುತ್ತೇವೆ..ಇದನ್ನು ನೆನಪಿನಲ್ಲಿಡಿ!!!' ಎಂದಿದ್ದಾರೆ. #BanPfi ಎಂದು ಬರೆದುಕೊಂಡಿರುವ ರಾಣೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿ, ಮತ್ತೊಂದು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಮತ್ತೋರ್ವ ಬಿಜೆಪಿಯ ಶಾಸಕ ರಾಮ್ ಸಾತ್ಪುತೆ ಅವರು ಘೋಷಣೆಗಳನ್ನು ಕೂಗಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಪುಣೆ ಪೊಲೀಸರು ಅವರನ್ನು ಬಂಧಿಸಬೇಕು ಎಂದಿದ್ದಾರೆ.
— nitesh rane (@NiteshNRane) September 24, 2022
ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಏಕನಾಥ್ ಶಿಂಧೆ
ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಈ ರೀತಿಯ ಘೋಷಣೆಗಳನ್ನು ರಾಜ್ಯದಲ್ಲಿ ಸಹಿಸಲಾಗುವುದಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾಗಿರುವ ದೇವೇಂದ್ರ ಫಡ್ನವಿಸ್ ಕೂಡ ಇಂತಹ ಘೋಷಣೆಗಳನ್ನು ಕೂಗಿದವರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದಿದ್ದಾರೆ. ಶುಕ್ರವಾರ ಪುಣೆಯಲ್ಲಿ ಪ್ರತಿಭಟನೆಯ ವೇಳೆ ಪಿಎಫ್ಐ ಕಾರ್ಯಕರ್ತರು ಒಂದೆರಡು ಬಾರಿ ಈ ರೀತಿಯ ಘೋಷಣೆಗಳನ್ನು ಮೊಳಗಿಸಲಾಗಿದೆ ಎನ್ನಲಾಗಿದೆ.
पुण्यात ज्या समाजकंटकांनी पाकिस्तान झिंदाबादचे नारे दिले त्या प्रवृत्तीचा करावा तेवढा निषेध कमीच आहे. पोलीस यंत्रणा त्यांच्याविरोधात योग्य ती कारवाई करेलच, पण शिवरायांच्या भूमीत असले नारे अजिबात सहन केले जाणार नाहीत.
— Eknath Shinde - एकनाथ शिंदे (@mieknathshinde) September 24, 2022
ಇದನ್ನೂ ಓದಿ-Viral Video: ಎಟಿಎಂನಲ್ಲಿ ಮೂತ್ರ ಮಾಡಿ ಅಡ್ಡ ಮಲಗಿದ ಹಸು: ವಿಧಿಯಿಲ್ಲದೆ ಮೂಗು ಮುಚ್ಚಿಕೊಂಡೇ ಹಣ ಡ್ರಾ ಮಾಡ್ಬೇಕು
ಪುಣೆ ಪೊಲೀಸರು ಹೇಳಿದ್ದೇನು?
ಪಿಎಫ್ಐ ಸಂಘಟನೆಯ ಮೇಲೆ ರಾಷ್ಟ್ರವ್ಯಾಪಿ ದಾಳಿ ನಡೆಸಿ ಕಾರ್ಯಕರ್ತರ ಬಂಧನ ಖಂಡಿಸಿ ಪಿಎಫ್ಐ ಕಾರ್ಯಕರ್ತರು ಇತ್ತೀಚೆಗಷ್ಟೇ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಸುಮಾರು 40 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪುಣೆ ಪೊಲೀಸರು ತಿಳಿಸಿದ್ದಾರೆ. ಅಕ್ರಮ ಪ್ರತಿಭಟನೆ ನಡೆಸಿದ ಪಿಎಫ್ಐ ಸದಸ್ಯರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿದ್ದು, ಘೋಷಣೆ ಕೂಗಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ ಸಾಗರ್ ಪಾಟೀಲ್ ಹೇಳಿದ್ದಾರೆ.
"Pakistan Zindabad" slogans ring out at #PFI protest rally in Maharashtra's Pune. pic.twitter.com/f7FNJKAWO1
— Shivangi Thakur (@thakur_shivangi) September 24, 2022
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.