India vs Australia 3rd T20I: ಫೈನಲ್ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ: ಫೀಲ್ಡಿಂಗ್ ಆಯ್ಕೆ

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3 ನೇ ಟಿ20 ಪಂದ್ಯ ಸಖತ್ ಥ್ರಿಲ್ಲಿಂಗ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಕೈವಶ ಮಾಡಿಕೊಳ್ಳಲು ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ.

Written by - Bhavishya Shetty | Last Updated : Sep 25, 2022, 06:36 PM IST
    • ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದ ಟೀಂ ಇಂಡಿಯಾ
    • ಸರಣಿ ಕೈವಶ ಮಾಡಿಕೊಳ್ಳಲು ಬ್ಲೂ ಬಾಯ್ಸ್ ಸಜ್ಜು
    • ರಣರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
India vs Australia 3rd T20I: ಫೈನಲ್ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ: ಫೀಲ್ಡಿಂಗ್ ಆಯ್ಕೆ title=
Cricket

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಮತ್ತು ಅಂತಿಮ ಸರಣಿಯನ್ನು ಆಡುತ್ತಿದೆ. ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆಯೋ ಅವರು ಸರಣಿ ಕೈವಶ ಮಾಡಿಕೊಳ್ಳಲಿದ್ದಾರೆ. ಸದ್ಯ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.

ಇದನ್ನೂ ಓದಿ: IND vs AUS : ಈ ಫ್ಲಾಪ್ ಆಟಗಾರ ಟೀಂ ಇಂಡಿಯಾ Playing 11 ನಿಂದ ಔಟ್!

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3 ನೇ ಟಿ20 ಪಂದ್ಯ ಸಖತ್ ಥ್ರಿಲ್ಲಿಂಗ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಕೈವಶ ಮಾಡಿಕೊಳ್ಳಲು ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ಅಷ್ಟೇ ಅಲ್ಲದೆ ಜಸ್ಪ್ರೀತ್ ಬುಮ್ರಾ ಸಹ ತಂಡಕ್ಕೆ ಮರಳಿದ್ದು, ನಿರೀಕ್ಷೆಗಳ ಮಟ್ಟ ಹೆಚ್ಚಾಗಿದೆ. ಇಡೀ ದೇಶವೇ ಇಂದಿನ ಮ್ಯಾಚ್ ಕಡೆಗೆ ಗಮನ ಹರಿಸಿದ್ದು, ಟೀಂ ಇಂಡಿಯಾದ ಗೆಲುವಿಗೆ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Virat Kohli ಮುಡಿಯೇರುತ್ತಾ ಹೊಸ ದಾಖಲೆ? ಟೀಂ ಇಂಡಿಯಾದ ಯಾವುದೇ ಆಟಗಾರ ಮಾಡಿರದ ಶ್ರೇಷ್ಠ ಸಾಧನೆಯಿದು

ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ನೇರಪ್ರಸಾರ ಮಾಡುತ್ತಿದೆ. ಜೊತೆಗೆ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News