ಬೆಂಗಳೂರು : ಇಂದು (ಸೆ.27) ವಿಶ್ವ ಪ್ರವಾಸೋದ್ಯಮ ದಿನ. ನಮ್ಮ ದೇಶ ಪ್ರವಾಸಿ ತಾಣಗಳ ತವರು ಎಂದೇ ಹೇಳಬಹುದು. ಧಾರ್ಮಿಕ ಕ್ಷೇತ್ರಗಳಿಂದ ಹಿಡಿದು, ಕಣ್ಣಿಗೆ ಮುದ, ಹಬ್ಬ ನೀಡುವ ಪ್ರಾಕೃತಿಕ ತಾಣಗಳು ಸೇರಿದಂತೆ ಪ್ರವಾಸಿಗರ ಮನತಣಿಸುವಷ್ಟು ವಿಭಿನ್ನವಾದ ಪ್ರವಾಸಿ ತಾಣಗಳು ನಮ್ಮ ದೇಶದಲ್ಲಿದೆ. ಕೊರೋನಾ ಮುಗಿದ ಮೇಲೆ ಪ್ರವಾಸೋದ್ಯಮ ಮತ್ತೆ ಚೇತರಿಸಿಕೊಳ್ಳುತ್ತಿದ್ದು, ಪ್ರವಾಸಿಗರ ಸಂಖ್ಯೆಯಲ್ಲಿಯೂ ಹೆಚ್ಚಳ ಕಂಡಿದೆ.
ಇದನ್ನೂ ಓದಿ : BBK 9 Day 2 : ಸಂಬರಗಿ ಸವಾಲ್ಗೆ ಹೆಣ್ಮಕ್ಳು ಕೊಟ್ರು ಜವಾಬ್
2022 ರಲ್ಲಿ ರೀ ಥಿಂಕಿಂಗ್ ಟೂರಿಸಂ (ಪ್ರವಾಸೋದ್ಯಮದ ಬಗ್ಗೆ ಮತ್ತೆ ವಿಚಾರ ಮಾಡುವುದು) ಅಭಿವೃದ್ಧಿಗೆ ಪ್ರವಾಸೋದ್ಯಮ ಆಧಾರ ಸ್ತಂಭ ಎಂಬ ಆಲೋಚನೆ ಬೆಳಸುವುದು ಎಂಬ ಧ್ಯೇಯದೊಂದಿಗೆ ವಿಶ್ವ ಪ್ರವಾಸೋದ್ಯಮವನ್ನು ಆಚರಿಸಲಾಗುತ್ತಿದೆ. ವಿಶ್ವ ಪ್ರವಾಸೋದ್ಯಮಕ್ಕೆ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದು, ನಮ್ಮ ಪರಿಸರವನ್ನು ಉಳಿಸಿ ಬೆಳೆಸೋಣ, ಎಲೆಮರೆ ಕಾಯಿಯಂತೆ ಇರುವ ಪ್ರವಾಸಿತಾಣಗಳನ್ನು ಅಭಿವೃದ್ಧಿ ಪಡಿಸೋಣ ಎಂದು ಕರೆ ನೀಡಿದ್ದಾರೆ.
"ಕೋವಿಡ್ ನಂತರದ ದಿನಗಳಲ್ಲಿ ಪ್ರವಾಸೋದ್ಯಮ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರ "ಒಂದು ರಾಜ್ಯ - ಹಲವು ಜಗತ್ತು" ಎಂಬಂತೆ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಭರಪೂರ ಅವಕಾಶ ಕಲ್ಪಿಸಿದೆ. ವಿಶ್ವ ಪ್ರವಾಸೋದ್ಯಮ ದಿನದ ಹಾರ್ದಿಕ ಶುಭಾಶಯಗಳು.
ಭಾರತದ ನಯಾಗಾರವೆಂದೇ ಕರೆಯಲಾಗುವ ಗೋಕಾಕ್ ಜಲಪಾತವು ಕರ್ನಾಟಕದ ಎರಡನೇ ದೊಡ್ಡ ಜಲಪಾತ. ಬೆಳಗಾವಿಯ ಗೋಕಾಕ್ ನಿಂದ 6 ಕಿ. ಮೀ ದೂರದಲ್ಲಿರುವ ಈ ಜಲಪಾತವು ಘಟಪ್ರಭ ನದಿಯಿಂದ ಉಂಟಾಗುತ್ತದೆ. ಈ ವಿಶ್ವ ಪ್ರವಾಸೋದ್ಯಮ ದಿನದಂದು ನಮ್ಮ ಹಿರಿಯರು ಹಾಗೂ ಪ್ರಕೃತಿಯು ನೀಡಿದ ಪರಿಸರವನ್ನು ಉಳಿಸಿ ಬೆಳೆಸೋಣ.
ಉಡುಪಿ ಮತ್ತು ಚಿಕ್ಕಮಗಳೂರು ಸುಂದರವಾದ ತಾಣಗಳಾಗಿದೆ, ಧಾರ್ಮಿಕ ಸ್ಥಳಗಳನ್ನೊಳಗೊಂಡ ಉಡುಪಿ ದೇವತೆಗಳ ನೆಲೆಯಾಗಿದ್ದು, ರಾಜ್ಯಕ್ಕೆ ಉಡುಗೊರೆಯಾಗಿದೆ. ತೀರ್ಥಯಾತ್ರೆಗಳು ಮತ್ತು ವಿಹಾರಗಳಿಗೆ ಅವು ಸರ್ವೋತ್ಕೃಷ್ಟ ತಾಣಗಳಾಗಿವೆ.
ಇದನ್ನೂ ಓದಿ : Mrunal Thakur: ನೇರಳೆ ಸೀರೆಯಲ್ಲಿ ನಟಿ ಮೃಣಾಲ್ ಸೌಂದರ್ಯಕ್ಕೆ ಮರುಳಾದ ಫ್ಯಾನ್ಸ್.!
ಸುದೀರ್ಘ ಪರಂಪರೆ, ಇತಿಹಾಸ ಹೊಂದಿರುವ ಕನ್ನಡನಾಡು ಪ್ರವಾಸಿಗರ ಸ್ವರ್ಗ. ನಮ್ಮ ನಾಡಿನಲ್ಲಿರುವ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಪ್ರವಾಸಿ ತಾಣಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ಆಗಬೇಕಿದೆ. ಈ ಕುರಿತು ಅರಿವು ಮೂಡಿಸೋಣ. ಎಲ್ಲರಿಗೂ ವಿಶ್ವ ಪ್ರವಾಸೋದ್ಯಮ ದಿನದ ಶುಭಾಶಯಗಳು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.