Video : ಬೆಂಗಾವಲು ಪಡೆ ತಡೆದು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ

ಗುಜರಾತ್ ನಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ಪ್ರಧಾನಿ ಮೋದಿ ಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿಡ ಘಟನೆ ನಡೆದಿದೆ.  ಈ  ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 

Written by - Ranjitha R K | Last Updated : Sep 30, 2022, 03:55 PM IST
  • ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ
  • ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
  • ಹಲವು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
Video : ಬೆಂಗಾವಲು ಪಡೆ  ತಡೆದು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ  title=
PM Modi Convoy

ಗುಜರಾತ್ : ಗುಜರಾತ್ ನಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ಪ್ರಧಾನಿ ಮೋದಿ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ ಘಟನೆ ನಡೆದಿದೆ.  ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹಿಂತಿರುಗುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದಾರೆ. 

 

ಹಲವು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ  :
ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ಅವರು ಗಾಂಧಿನಗರದಿಂದ ಅಹಮದಾಬಾದ್‌ನ ಕಲುಪುರ್ ನಿಲ್ದಾಣದವರೆಗೆ ರೈಲಿನಲ್ಲಿ ಸಂಚರಿಸಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಗಾಂಧಿನಗರ ರೈಲು ನಿಲ್ದಾಣದಿಂದ ಈ ರೈಲಿಗೆ ಪ್ರಧಾನಿ ಮೋದಿ  ಹಸಿರು ನಿಶಾನೆ ತೋರಿದರು . 

ಇದನ್ನೂ ಓದಿ :  Congress President Election 2022 : ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್-ಗೆಹ್ಲೋಟ್ ಔಟ್!

ಸಾಮಾನ್ಯ ಜನರೊಂದಿಗೆ ಬೆರೆತ ಪ್ರಧಾನಿ ಮೋದಿ :
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಕೋಚ್‌ಗಳನ್ನು ಪ್ರಧಾನಿ ಮೋದಿ ಅವರು ಪರಿಶೀಲನೆ ನಡೆಸಿದರು. ಭೇಟಿಯ ಸಂದರ್ಭದಲ್ಲಿ, ಪ್ರಧಾನಿಯವರು ರೈಲ್ವೆ ಉದ್ಯೋಗಿಗಳ ಕುಟುಂಬ ಸದಸ್ಯರು, ಮಹಿಳಾ ಉದ್ಯಮಿಗಳು ಮತ್ತು ಸಂಶೋಧಕರು ಮತ್ತು ಯುವಕರು ಸೇರಿದಂತೆ ತಮ್ಮ ಸಹ-ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ವಂದೇ ಭಾರತ್ ರೈಲುಗಳನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿರುವ ಕಾರ್ಮಿಕರು, ಎಂಜಿನಿಯರ್‌ಗಳು ಮತ್ತು ಇತರ ಉದ್ಯೋಗಿಗಳೊಂದಿಗೆ ಅವರು  ಮಾತುಕತೆ ನಡೆಸಿದರು. 

ಇದೆ ವೇಳೆ ಮಾತನಾಡಿದ ಪ್ರಧಾನಮಂತ್ರಿ, 8 ವರ್ಷಗಳಲ್ಲಿ ಒಂದರ ಹಿಂದೆ ಒಂದರಂತೆ ದೇಶದ ಎರಡು ಡಜನ್‌ಗೂ ಹೆಚ್ಚು ನಗರಗಳಲ್ಲಿ ಮೆಟ್ರೋ ಆರಂಭವಾಗಿದೆ ಎಂದು ಹೇಳಿದರು. ದೇಶದ ಹತ್ತಾರು ಸಣ್ಣ ನಗರಗಳು ವಾಯು ಸಂಪರ್ಕ ಹೊಂದಿವೆ. ಸಣ್ಣ ಪಟ್ಟಣಗಳಿಗೆ ವಿಮಾನ ಸಂಪರ್ಕ ಕಲ್ಪಿಸುವಲ್ಲಿ 'ಉಡಾನ್' ಯೋಜನೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪ್ರಸನ್ನ ಬಿ ವರಾಳೆ ಹೆಸರು ಶಿಫಾರಸ್ಸು

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News