ವಿಜಯಪುರ : ರಾಜ್ಯದ ಎರಡು ಜವಳಿ ಪಾರ್ಕ್ಗಳನ್ನು ಕಲಬುರಗಿ ಮತ್ತು ವಿಜಯಪುರದಲ್ಲಿ ಸ್ಥಾಪಿಸಲು ಅನುದಾನ ನೀಡಿ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಒಂದು ಸಾವಿರ ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ಜವಳಿ ಪಾರ್ಕ್ನಿಂದ ಸುಮಾರು 25 ಸಾವಿರ ಯುವಕರಿಗ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ನಗರದ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್, ವಿಜಯಪುರ ಇವರ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಜೆ.ಎಸ್.ಎಸ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿರುವ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕಲಬುರಗಿ ಮತ್ತು ವಿಜಯಪುರದಲ್ಲಿ ಸ್ಥಾಪಿಸಲು ಅನುದಾನ ನೀಡಿ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ಬ್ಯಾಂಕ್ ಗ್ರಾಹಕರೆ ಗಮನಿಸಿ : ಅಕ್ಟೋಬರ್ ತಿಂಗಳಲ್ಲಿ 21 ದಿನ ಬ್ಯಾಂಕ್ ಬಂದ್!
ದ್ರಾಕ್ಷಿ ಬೆಳೆಯ ಅಭಿವೃದ್ಧಿ ಹಾಗೂ ಸಂಗ್ರಹಣೆಗಾಗಿ 35 ಕೋಟಿ ರೂ.ಅನುದಾನ : 400 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮೀಸಲಿರಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಹಂತ 3 ರ ಯೋಜನೆಯನ್ನು ಕಾರ್ಯಗತಗೊಳಿಸಲು ಅನುವಾಗುವಂತೆ ನ್ಯಾಯಾಲಯದಿಂದ ಆದೇಶ ಬರಲಿದೆ ಎಂಬ ವಿಶ್ವಾಸವಿದೆ. ಅಧಿಸೂಚನೆ ನಂತರ ಕೃಷ್ಣಾ ಮೇಲ್ದಂಡೆ ಹಂತ 3 ರ ಯೋಜನೆಯಿಂದ ಮುಳುಗಡೆಯಾಗಲಿರುವ ಗ್ರಾಮಗಳ ಜನರಿಗೆ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳನ್ನು ಮಾರ್ಚ್ ತಿಂಗಳೊಳಗೆ 10,000 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ದ್ರಾಕ್ಷಿ ಬೆಳೆಯ ಅಭಿವೃದ್ಧಿ ಹಾಗೂ ಸಂಸ್ಕರಣೆಗಾಗಿ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿ 35 ಕೋಟಿ ರೂ.ಗಳನ್ನು ನೀಡಲಾಗಿದೆ. ದ್ರಾಕ್ಷಿ ಬೆಳೆಗಾರರಿಗೆ ಅನುಕೂಲವಾಗುವಂತೆ ಶೀತಲ ಸಂಗ್ರಹಾಗಾರದ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಕಾಂತಾರʼ ಸಿಂಗಾರ ಸಿರಿ ಸಪ್ತಮಿ ನೋಟಕ್ಕೆ ಮೂಕವಿಸ್ಮಿತರಾದ ಫ್ಯಾನ್ಸ್..!
ಯುವಕರಿಗೆ ಉದ್ಯೋಗಾವಕಾಶ: ರಾಜ್ಯದಲ್ಲಿ ಉತ್ತರ ಮತ್ತು ದಕ್ಷಿಣ ಟೂರಿಸಂ ಸರ್ಕೀಟ್ ಗಳನ್ನು ಮಾಡಲಾಗಿದೆ. ಉತ್ತರ ಸರ್ಕೀಟ್ ನಲ್ಲಿ ಹಂಪಿ, ಬಾದಾಮಿ, ಪಟ್ಟದಕಲ್ಲು ಮತ್ತು ವಿಜಯಪುರ ಜಿಲ್ಲೆಗಳಿವೆ. ಇದಕ್ಕೆ ಪೂರಕವಾದ ಸಕಲ ವ್ಯವಸ್ಥೆಗಳನ್ನು ಕಲ್ಪಿಸಿ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸಲಾಗುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ವಿಜಯನಗರ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶವನ್ನೂ ಕಲ್ಪಿಸಿದಂತಾಗುತ್ತದೆ. ಈ ಐದು ಕೊಡುಗೆಗಳನ್ನು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ನೀಡಲಾಗುವುದು. ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ವಿಜಯಪುರದ ವಿಮಾನ ನಿಲ್ದಾಣ ಉದ್ಘಾಟನೆ : ಮುಂದಿನ ಮೂರು ತಿಂಗಳಲ್ಲಿ ವಿಜಯಪುರದ ವಿಮಾನ ನಿಲ್ದಾಣದ ಅಭಿವೃದ್ಧಿಗೆ 125 ಕೋಟಿ ರೂ. ಅನುದಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿ, ಮುಂದಿನ ಫೆಬ್ರವರಿಯೊಳಗೆ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿಯವರಿಂದ ಉದ್ಘಾಟಿಸಲಾಗುವುದು. ವಿಮಾಣನಿಲ್ದಾಣಕ್ಕೆ ಬಸವೇಶ್ವರರ ಹೆಸರನ್ನು ನೀಡಲು ಕೇಂದ್ರದಿಂದ ಅನುಮತಿ ಪಡೆಯಲಾಗುವುದು .ಸಾರ್ವಜನಿಕ ಆಸ್ಪತ್ರೆ ಆಗುವ ಬೇಡಿಕೆಯಿದ್ದು, ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆ ಮಂಜೂರು ಮಾಡಲಾಗುವುದು ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.