ದೆಹಲಿಯಲ್ಲಿ ರಾತ್ರಿ ಸಂದರ್ಭದಲ್ಲಿ ಆಹಾರ ವ್ಯವಸ್ಥೆ ಕಲ್ಪಿಸುವಂತೆ LG VK ಸಕ್ಸೇನಾ ಆನ್‌ಲೈನ್ ಶಾಪಿಂಗ್ ಮತ್ತು ಡೆಲಿವರಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಾರಿಗೆ ಸೌಲಭ್ಯಗಳನ್ನು ಒಳಗೊಂಡಂತೆ 300 ಕ್ಕೂ ಹೆಚ್ಚು ಸಂಸ್ಥೆಗಳನ್ನು 24x7 ತೆರೆದಿರಲು ಅನುಮೋದಿಸಿದ್ದಾರೆ.
ಇದನ್ನೂ ಓದಿ: Viral Video : 20 ವರ್ಷದ ಯುವತಿಯನ್ನು ಮದುವೆಯಾದ ಬಚ್ಚು ಬಾಯಿ ಮುದುಕನ ಖುಷಿ ನೋಡಿ..
314 ಅರ್ಜಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗವರ್ನರ್ ಅನುಮೋದಿಸಿದ್ದಾರೆ, ಅವುಗಳಲ್ಲಿ ಕೆಲವು 2016 ರಿಂದ ಬಾಕಿ ಉಳಿದಿವೆ. ಏಳು ದಿನಗಳೊಳಗೆ ಈ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಸೂಚಿಸಿದ್ದಾರೆ. ಈ ವಿನಾಯಿತಿಗಳನ್ನು ಪಡೆಯಲು ಈ ಸಂಸ್ಥೆಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಸ್ತಾವನೆಯನ್ನು ಅನುಮೋದಿಸುವಾಗ, ಸಂಸ್ಥೆಗಳು ಮಾಡಿದ ಅರ್ಜಿಗಳ ವಿಲೇವಾರಿಯಲ್ಲಿ ಕಾರ್ಮಿಕ ಇಲಾಖೆಯಿಂದ ಅತಿಯಾದ ವಿಳಂಬವನ್ನು ಎಲ್‌ಜಿ ಗಂಭೀರವಾಗಿ ಪರಿಗಣಿಸಿದೆ. ದೆಹಲಿಯಲ್ಲಿ ಹೂಡಿಕೆದಾರರು ಮತ್ತು ವ್ಯಾಪಾರ ಸ್ನೇಹಿ ವಾತಾವರಣವನ್ನು ಉತ್ತೇಜಿಸುವ ಸಲುವಾಗಿ ಅಂತಹ ಅರ್ಜಿಗಳನ್ನು ಕಟ್ಟುನಿಟ್ಟಾದ ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ LG ಆದೇಶಿಸಿದೆ.
ಮುಂದಿನ ವಾರದಿಂದ 300 ಕ್ಕೂ ಹೆಚ್ಚು ಸಂಸ್ಥೆಗಳು ರಾಷ್ಟ್ರ ರಾಜಧಾನಿಯಲ್ಲಿ 24 ಗಂಟೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು LG ಹೇಳಿದೆ.
ಇದನ್ನೂ ಓದಿ: "ಕಾಂಡೋಮ್ ಗಳನ್ನು ಹೆಚ್ಚು ಬಳಸುತ್ತಿರುವುದು ಮುಸ್ಲಿಮರೇ"
"Delhi Shops and Establishment Act 1954ರ ಸೆಕ್ಷನ್ 14, 15 ಮತ್ತು 16 ರ ಅಡಿಯಲ್ಲಿ ವಿನಾಯಿತಿಗಳನ್ನು ನೀಡುವ ನಿರ್ಧಾರವು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತದೆ. ಇದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ಅನುಕೂಲಕರವಾದ ಧನಾತ್ಮಕ ಮತ್ತು ಅನುಕೂಲಕರ ವ್ಯಾಪಾರ ವಾತಾವರಣವನ್ನು ಉತ್ತೇಜಿಸುತ್ತದೆ" ಎಂದು ಅಧಿಕಾರಿಯೊಬ್ಬರು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.