ಬೆಂಗಳೂರು: ಕಮರ್ ಫಿಲ್ಮ್ ಫ್ಯಾಕ್ಟರಿಯೊಂದಿಗೆ 67ನೇ ಪಾರ್ಲೆ ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್ 2022 ಬೆಂಗಳೂರಿನಲ್ಲಿ ನಡೆಯುತ್ತಿದೆ. ಇದೇ ವೇಳೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಚಲನಚಿತ್ರೋದ್ಯಮಗಳಲ್ಲಿ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರಿಗೆ ಜೀವನಶ್ರೇಷ್ಠ ಸಾಧನೆಗಾಗಿ ಫಿಲಂ ಫೇರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಇದಕ್ಕೂ ಮೊದಲು ಇಂದು ಕರ್ನಾಟಕದ ಜೀವ ವೈವಿಧ್ಯವನ್ನು ಬಿಂಬಿಸುವ ಗಂಧದಗುಡಿ ಸಾಕ್ಷಿ ಚಿತ್ರದ ಟ್ರೈಲರ್ ನ್ನು ಬಿಡುಗಡೆ ಮಾಡಲಾಯಿತು.
The Filmfare Awards South posthumously honour #PuneethRajkumar with the Lifetime Achievement Award at the 67th #ParleFilmfareAwardsSouth 2022 with Kamar Film Factory. pic.twitter.com/c6Y5bJTrL3
— Filmfare (@filmfare) October 9, 2022
ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭಕೋರಿದರು. ಪ್ರಧಾನಿ ಮೋದಿ ಈ ಕುರಿತಾಗಿ ಟ್ವೀಟ್ ಮಾಡಿ “ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು” ಎಂದು ಶುಭ ಹಾರೈಸಿದರು.
ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.