ಬಳ್ಳಾರಿ ಪ್ರವೇಶಕ್ಕೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ..!

ಮಗಳ ಹೆರಿಗೆ ಹಿನ್ನೆಲೆ ಬಳ್ಳಾರಿಗೆ ತೆರಳಲು ಅನುಮತಿ ಕೋರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಿದೆ. ಇಂದು ಈ ಬಗ್ಗೆ ತೀರ್ಪು ನೀಡಿದ ನ್ಯಾ.ಎಂ.ಆರ್.ಶಾ ಅವರ ಪೀಠ,ನವೆಂಬರ್ 6 ರ ವರೆಗೆ ಭೇಟಿ ನೀಡಲು ಮತ್ತು ವಾಸ್ತವ್ಯ ಹೂಡಲು ಅನುಮತಿ ನೀಡಿದೆ.

Written by - RACHAPPA SUTTUR | Edited by - Krishna N K | Last Updated : Oct 12, 2022, 01:17 PM IST
  • ಬಳ್ಳಾರಿ ಪ್ರವೇಶಕ್ಕೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ
  • ಮಗಳ 2ನೇ ಹೆರಿಗೆ ಹಿನ್ನೆಲೆ 2 ತಿಂಗಳ ಕಾಲ ಮಗಳ ಜೊತೆಗೆ ಇರಲು ಅವಕಾಶ ನೀಡುವಂತೆ ರೆಡ್ಡಿ ಅರ್ಜಿ
  • ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಈ ಆದೇಶವನ್ನು ಇಂದು ಪ್ರಕಟಿಸಿದೆ
ಬಳ್ಳಾರಿ ಪ್ರವೇಶಕ್ಕೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ..! title=

ನವದೆಹಲಿ : ಮಗಳ ಹೆರಿಗೆ ಹಿನ್ನೆಲೆ ಬಳ್ಳಾರಿಗೆ ತೆರಳಲು ಅನುಮತಿ ಕೋರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಿದೆ. ಇಂದು ಈ ಬಗ್ಗೆ ತೀರ್ಪು ನೀಡಿದ ನ್ಯಾ.ಎಂ.ಆರ್.ಶಾ ಅವರ ಪೀಠ,ನವೆಂಬರ್ 6 ರ ವರೆಗೆ ಭೇಟಿ ನೀಡಲು ಮತ್ತು ವಾಸ್ತವ್ಯ ಹೂಡಲು ಅನುಮತಿ ನೀಡಿದೆ.

ಮಗಳ 2ನೇ ಹೆರಿಗೆ ಹಿನ್ನೆಲೆ 2 ತಿಂಗಳ ಕಾಲ ಮಗಳ ಜೊತೆಗೆ ಇರಬೇಕಿದೆ. ಇದಕ್ಕಾಗಿ ಬಳ್ಳಾರಿಗೆ ತೆರಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಅನುಮತಿ ನೀಡಲು ಸಿಬಿಐ ವಿರೋಧ ವ್ಯಕ್ತಪಡಿಸಿತ್ತು. 2 ತಿಂಗಳ ಕಾಲ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿದ್ದರೆ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು ಎಂದು ಆಕ್ಷೇಪ ವ್ಯಕ್ತಪಡಿಸಿತ್ತು. ಸಿಬಿಐ ಆಕ್ಷೇಪದ ಬಳಿಕ ಕನಿಷ್ಠ 1 ತಿಂಗಳ ಕಾಲವಾದರೂ ಅನುಮತಿ ನೀಡಬೇಕು ಮತ್ತು ನನ್ನ ಮೇಲೆ ಪೊಲೀಸ್ ನಿಗಾ ಇಡಬಹುದು ಎಂದು ಜನಾರ್ದನ ರೆಡ್ಡಿ ಕೇಳಿಕೊಂಡಿದ್ದರು. ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಈ ಆದೇಶವನ್ನು ಇಂದು ಪ್ರಕಟಿಸಿದೆ.

ಇದನ್ನೂ ಓದಿ:ರೈತರಿಗೆ ಆದಾಯ ಡಬಲ್ : ಹೊಸ ಯೋಜನೆ ಘೋಷಿಸಿದ ಅಮಿತ್ ಶಾ 

ಬಳ್ಳಾರಿಗೆ ತೆರಳಲು ಅನುಮತಿ ನೀಡಿದ್ದಲ್ಲದೇ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಪ್ರತಿನಿತ್ಯ ವಿಚಾರಣೆಯನ್ನು ನಡೆಸುವಂತೆ ಮತ್ತು ನವೆಂಬರ್ 9 ರಿಂದ 6 ತಿಂಗಳಲ್ಲಿ ಸಂಪೂರ್ಣ ವಿಚಾರಣೆ ಪೂರ್ಣಗೊಳಿಸಲು ಕೇಳಿ ಹಂತದ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್ ಈ ಹಿಂದೆ ಬಳ್ಳಾರಿ ತೆರಳಲು ನಿರ್ಬಂಧಿಸಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News