ಪೊಲೀಸರ ಲಾಠಿ ಕಿತ್ತು ಬಿಸಾಡುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ಇನ್ನಿಲ್ಲ

ಲಲಿತಾ ಟಾಗೆಟ್  ಅವರು ತಮ್ಮ 14 ನೇ ವಯಸ್ಸಿನಲ್ಲಿ ಸ್ವಾತಂತ್ರ್ಯದ ಘೋಷಣೆಗಳಿಂದ ಸ್ಪೂರ್ತಿಗೊಂಡು ಚಳವಳಿಗೆ ಧುಮುಕಿದ್ದರು.‌ ಕುಟುಂಬಸ್ಥರ ಮಾತು ಕೇಳದೆ ಬ್ರಿಟಿಷರ ವಿರುದ್ಧದ ಮೆರವಣಿಗೆಗಳಲ್ಲಿ ಭಾಗವಹಿಸಿ, ಘೋಷಣೆಗಳನ್ನು ಕೂಗಿ ಗಮನ ಸೆಳೆದಿದ್ದರು.

Written by - Yashaswini V | Last Updated : Oct 11, 2022, 07:47 AM IST
  • ಪ್ರತಿಭಟನೆ, ಮೆರವಣಿಗೆಗಳಲ್ಲಿ ಮುಂದಿರುತ್ತಿದ್ದ ಲಲಿತಾ ಟಾಗೆಟ್ ಅವರು ಕೆಲವೊಮ್ಮೆ ಪೊಲೀಸರ ಲಾಠಿಗಳನ್ನು ಕಿತ್ತುಕೊಂಡು ಬಿಸಾಡುತ್ತಿದ್ದರಂತೆ.
  • ಕುಟುಂಬಸ್ಥರ ಮಾತು ಕೇಳದೆ ಬ್ರಿಟಿಷರ ವಿರುದ್ಧದ ಮೆರವಣಿಗೆಗಳಲ್ಲಿ ಭಾಗವಹಿಸಿ, ಘೋಷಣೆಗಳನ್ನು ಕೂಗಿ ಗಮನ ಸೆಳೆದಿದ್ದರು.
  • ಪೊಲೀಸ್ ಠಾಣೆಗಳ ಬಳಿ ತೆರಳಿ ಅಲ್ಲಿನ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪರಾರಿಯಾಗುತ್ತಿದ್ದರಂತೆ.
ಪೊಲೀಸರ ಲಾಠಿ ಕಿತ್ತು ಬಿಸಾಡುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ಇನ್ನಿಲ್ಲ title=
Lalita Taggett death

ಚಾಮರಾಜನಗರ: ಕಳೆದವಾರವಷ್ಟೇ ಅಕ್ಟೋಬರ್ 5 ರಂದು 91 ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಚಾಮರಾಜನಗರದ ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ವಯೋಸಹಜವಾಗಿ ನಿಧನರಾಗಿದ್ದಾರೆ‌. ಚಾಮರಾಜನಗರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 

ಲಲಿತಾ ಟಾಗೆಟ್  ಅವರು ತಮ್ಮ 14 ನೇ ವಯಸ್ಸಿನಲ್ಲಿ ಸ್ವಾತಂತ್ರ್ಯದ ಘೋಷಣೆಗಳಿಂದ ಸ್ಪೂರ್ತಿಗೊಂಡು ಚಳವಳಿಗೆ ಧುಮುಕಿದ್ದರು.‌ ಕುಟುಂಬಸ್ಥರ ಮಾತು ಕೇಳದೆ ಬ್ರಿಟಿಷರ ವಿರುದ್ಧದ ಮೆರವಣಿಗೆಗಳಲ್ಲಿ ಭಾಗವಹಿಸಿ, ಘೋಷಣೆಗಳನ್ನು ಕೂಗಿ ಗಮನ ಸೆಳೆದಿದ್ದರು.

ಇದನ್ನೂ ಓದಿ- ಚುನಾವಣೆ ಮೂಡ್​ಗೆ ಜಾರಿದ ರಾಜಕೀಯ ಪಕ್ಷಗಳು ; 3 ಪಾರ್ಟಿಯಿಂದ ಯಾತ್ರೆ ಪಟ್ಟಿ ಸಿದ್ದ

ಪ್ರತಿಭಟನೆ, ಮೆರವಣಿಗೆಗಳಲ್ಲಿ ಮುಂದಿರುತ್ತಿದ್ದ ಲಲಿತಾ ಟಾಗೆಟ್ ಅವರು ಕೆಲವೊಮ್ಮೆ ಪೊಲೀಸರ ಲಾಠಿಗಳನ್ನು ಕಿತ್ತುಕೊಂಡು ಬಿಸಾಡುತ್ತಿದ್ದರಂತೆ. ಪೊಲೀಸ್ ಠಾಣೆಗಳ ಬಳಿ ತೆರಳಿ ಅಲ್ಲಿನ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪರಾರಿಯಾಗುತ್ತಿದ್ದರಂತೆ. 

ಇದನ್ನೂ  ಓದಿ- Doctor Murder Case: ಮಾಜಿ ಪ್ರೇಯಸಿಯ ವಿಚಾರಣೆ ವೇಳೆ ಹೊರಬಿತ್ತು ಅಸಲಿ ಸತ್ಯ!

ಈ ಸ್ವಾತಂತ್ರ್ಯ ಹೋರಾಟ, ಪ್ರತಿಭಟನೆ ಎಲ್ಲಾ ನಮ್ಮಂತವರಿಗಲ್ಲ ಎಂದು ತನ್ನ ತಾಯಿ ಮನೆಯಲ್ಲಿ ಕೂಡಿ ಹಾಕಿದರೂ ಕೂಡ ಛಾವಣಿ ಹೆಂಚು ಇಳಿಸಿ ಹೊರಹೋಗಿ ಪ್ರತಿಭಟನೆಯಲ್ಲಿ ಭಾಗಿಯಾಗುವುದು ಸಾಮಾನ್ಯವಾಗಿತ್ತು ಎಂದು ಲಲಿತಾ ಟಾಗೆಟ್ ಆಗಾಗ್ಗೆ
ಹಳೆಯ ನೆನಪುಗಳನ್ನು ಮೆಲುಕುಹಾಕುತ್ತಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News