ಬೆಂಗಳೂರು : ಹಾವೇರಿಯಲ್ಲಿ ಜನೇವರಿ 6, 7 ಮತ್ತು 8 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಪೂರ್ವಭಾವಿ ಸಭೆ ನಂತರ ಮಾತನಾಡಿದ ಸಚಿವ ಸುನೀಲ್ ಕುಮಾರ್, ಸಿಎಂ ಅವರ ಜೊತೆ ಚರ್ಚೆ ನಡೆಸಿ ದಿನಾಂಕ ಅಂತಿಮಗೊಳಿಸಿದ್ದೇವೆ. ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನರ ನಿರೀಕ್ಷೆ ಇದೆ. 30 ಸಾವಿರ ಜನರಿಗೆ ವಸತಿ ವ್ಯವಸ್ಥೆ, ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತಿದೆ. ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ.
ಇದನ್ನೂ ಓದಿ : ಸರ್ಕಾರಿ ನೌಕರರು ಪುಣ್ಯಕೋಟಿ ದತ್ತು ಪಡೆಯುವಂತೆ ಸಚಿವ ಪ್ರಭು ಚವ್ಹಾಣ್ ಮನವಿ
ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಶಾಸಕರಾದ ನೆಹರು ಓಲೇಕಾರ್, ಅರುಣ್ ಕುಮಾರ್, ಹಾವೇರಿ ಡಿಸಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಜಿಮ್ ದೇಶೀಯ ರೋಡ್ ಶೋಗೆ ದೆಹಲಿಯಲ್ಲಿ ಚಾಲನೆ ನೀಡಿದ ಸಚಿವ ನಿರಾಣಿ
ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.